ಬೆಂಗಳೂರಿನಲ್ಲಿ ಮುಂದುವರೆದ ಧಾರಾಕಾರ ಮಳೆ, ಇನ್ನೂ ಎರಡ್ಮೂರು ದಿನ ಭಾರೀ ಮಳೆ- ಹವಾಮಾನ ಇಲಾಖೆ ಮುನ್ಸೂಚನೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಂಡು ಕೇಳರಿಯದ ರೀತಿಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ, ಸದ್ಯಕ್ಕೆ ನಿಲ್ಲುವ ಸೂಚನೆ ಕಾಣುತ್ತಿಲ್ಲ. ಇನ್ನೂ ಎರಡ್ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಮಳೆಯ ಚಿತ್ರ
ಮಳೆಯ ಚಿತ್ರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಂಡು ಕೇಳರಿಯದ ರೀತಿಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ, ಸದ್ಯಕ್ಕೆ ನಿಲ್ಲುವ ಸೂಚನೆ ಕಾಣುತ್ತಿಲ್ಲ. ಇನ್ನೂ ಎರಡ್ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇಂದು ಮಧ್ಯಾಹ್ನದವರೆಗೂ ಸ್ವಲ್ಪ ಬಿಡುವು ನೀಡಿದ್ದ ಮಳೆ ಸಂಜೆಯಾಗುತ್ತಿದ್ದಂತೆ ಮತ್ತೆ ಅಬ್ಬರಿಸುತ್ತಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ 8 ಸೆಂಟಿ ಮೀಟರ್, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 9.6 ಮಿ.ಮೀ. ಹೆಚ್ ಎಎಲ್ ನಲ್ಲಿ 5 ಸೆಂಟಿ ಮೀಟರ್ ಮಳೆಯಾಗಿದ್ದು, ಇಂದಿಗೆ ಯೆಲ್ಲೋ ಆಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವಿಜ್ಞಾನಿ ಡಾ. ಅಗ್ನಿಹೋತ್ರಿ ತಿಳಿಸಿದ್ದಾರೆ. 

ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂದಿನ ಐದು ದಿನ ವ್ಯಾಪಕ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನ ಸಾಕಷ್ಟು ವ್ಯಾಪಕ ಮಳೆಯಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com