ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಎನ್‌ಐಎಯಿಂದ 32 ಕಡೆ ದಾಳಿ

ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಗೆ ನಡೆಸುತ್ತಿರುವ  ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ಪುತ್ತೂರು ಮತ್ತು ಸುಳ್ಯದಲ್ಲಿ 32 ಕಡೆ ಮನೆ, ಕಟ್ಟಡಗಳ ಮೇಲೆ ದಾಳಿ ನಡೆಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಸಿರುವುದಾಗಿ ತಿಳಿದು ಬಂದಿದೆ.
ಪ್ರವೀಣ್‌ ನೆಟ್ಟಾರು
ಪ್ರವೀಣ್‌ ನೆಟ್ಟಾರು

ದಕ್ಷಿಣ ಕನ್ನಡ: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಗೆ ನಡೆಸುತ್ತಿರುವ  ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ಪುತ್ತೂರು ಮತ್ತು ಸುಳ್ಯದಲ್ಲಿ 32 ಕಡೆ ಮನೆ, ಕಟ್ಟಡಗಳ ಮೇಲೆ ದಾಳಿ ನಡೆಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಸಿರುವುದಾಗಿ ತಿಳಿದು ಬಂದಿದೆ.

ಎನ್.ಐ.ಎ.ಅಧಿಕಾರಿಗಳಿಗೆ ಕರ್ನಾಟಕ ಪೊಲೀಸರು ಸಹಯೋಗ ನೀಡಿದ್ದಾರೆ. 10ಕ್ಕೂ ಹೆಚ್ಚು ವಾಹನಗಳಲ್ಲಿ ಬಂದಿರುವ ಅಧಿಕಾರಿಗಳು, ಬೆಳಿಗ್ಗೆ 6 ಗಂಟೆಯಿಂದಲೇ ತನಿಖೆ ಆರಂಭಿಸಿದ್ದಾರೆ. ಜುಲೈ 26 ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಕೊಲೆಯಲ್ಲಿ ಪ್ರತ್ಯಕ್ಷ ಅಥವಾ ಪರೋಕ್ಷ ಪಾತ್ರವಿದೆ ಎಂದು ಶಂಕಿಸಲಾದ ಹಲವಾರು ವ್ಯಕ್ತಿಗಳ ಮನೆ ಮತ್ತು ವ್ಯಾಪಾರ ಸಂಸ್ಥೆಗಳ ಮೇಲೆ ಎನ್‌ಐಎ ತಂಡಗಳು ದಾಳಿ ನಡೆಸಿವೆ ಎಂದು ಮೂಲಗಳು ತಿಳಿಸಿವೆ. ಸ್ಥಳೀಯ ಪೊಲೀಸರು ಎನ್‌ಐಎ ತಂಡಗಳ ಜೊತೆಗಿದ್ದು, ಮುಂಜಾನೆ ದಾಳಿ ಆರಂಭಿಸಿದ್ದು ಇನ್ನೂ ಮುಂದುವರಿದಿದೆ.

ಎನ್‌ಐಎ ದಾಳಿಯ ಬಗ್ಗೆ ಪೊಲೀಸರು ದೃಢಪಡಿಸಿದ್ದಾರೆ ಆದರೆ ಹೆಚ್ಚಿನ ವಿವರಗಳನ್ನು ನೀಡಲು ನಿರಾಕರಿಸಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆಯು ರಾಜ್ಯದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿತ್ತು. ಆಡಳಿತಾರೂಢ ಬಿಜೆಪಿ ತನ್ನದೇ ಕಾರ್ಯಕರ್ತರ ಆಕ್ರೋಶಕ್ಕೆ ತುತ್ತಾಗಿದೆ. ಒತ್ತಡಕ್ಕೆ ಮಣಿದ ಸರ್ಕಾರ ತನಿಖೆಯನ್ನು ಎನ್‌ಐಎಗೆ ವಹಿಸಿದೆ. ಎನ್‌ಐಎ ಪ್ರಜೆಯನ್ನು ವಹಿಸಿಕೊಳ್ಳುವ ಮುನ್ನವೇ ಸ್ಥಳೀಯ ಪೊಲೀಸರು ಕೊಲೆಗೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com