ಮಳೆಹಾನಿ: ಕಲಬುರಗಿ, ಹುಬ್ಬಳ್ಳಿಯಲ್ಲಿ ಕೇಂದ್ರ ಅಧ್ಯಯನ ತಂಡದಿಂದ ಪರಿಶೀಲನೆ

ಅತಿವೃಷ್ಟಿ ಹಾನಿ ಕುರಿತು ಅಧ್ಯಯನ ನಡೆಸಲು ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ತಂಡ ಇಂದು ಕಲಬುರಗಿ ಹಾಗೂ ಹುಬ್ಬಳ್ಳಿಯ ಹಲವೆಡೆ ವಿವಿಧೆಡೆ ಭೇಟಿ ನೀಡಿ,  ಪರಿಶೀಲನೆ ನಡೆಸಿತು.
ಕೇಂದ್ರ ಅಧ್ಯಯನ ತಂಡದಿಂದ ಪರಿಶೀಲನೆ ಚಿತ್ರ
ಕೇಂದ್ರ ಅಧ್ಯಯನ ತಂಡದಿಂದ ಪರಿಶೀಲನೆ ಚಿತ್ರ

ಕಲಬುರಗಿ: ಅತಿವೃಷ್ಟಿ ಹಾನಿ ಕುರಿತು ಅಧ್ಯಯನ ನಡೆಸಲು ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ತಂಡ ಇಂದು ಕಲಬುರಗಿ ಹಾಗೂ ಹುಬ್ಬಳ್ಳಿಯ ಹಲವೆಡೆ ವಿವಿಧೆಡೆ ಭೇಟಿ ನೀಡಿ, ಪರಿಶೀಲನೆ ನಡೆಸಿತು.

ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ನಿರ್ದೇಶಕ ಡಿ.ಕೆ. ಮನೋಹರನ್ ನೇತೃತ್ವದಲ್ಲಿನ ಕೇಂದ್ರ ಅಧ್ಯಯನ ತಂಡ, ಆಗಸ್ಟ್ ತಿಂಗಳಲ್ಲಿ ಕಲಬುರಗಿಯ ಜಿಲ್ಲೆಯಲ್ಲಿ ಮಳೆಯಿಂದಾದ ಬೆಳೆ ಹಾಗೂ ಮನೆ ಹಾನಿ ಕುರಿತು ಪರಿಶೀಲನೆ ನಡೆಸಿತು.

ಜಿಲ್ಲೆಯ ವಿವಿಧೆಡೆ ಭೇಟಿ ನೀಡಿದ ತಂಡ  ಆಗಸ್ಟ್ 2 ರಿಂದ 9 ರ ನಡುವೆ ಭಾರೀ ಮಳೆಯಿಂದ ಹಾನಿ ಕುರಿತು ರೈತರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆಯಿತು. ಪ್ರವಾಹದಿಂದಾಗಿ ಸುಮಾರು 11, 000 ಟ್ರ್ಯಾಕ್ಟರ್‌ಗಳು ಮತ್ತು 8, 500 ಮನೆಗಳು ಹಾನಿಗೊಳಗಾಗಿವೆ. ಕೇಂದ್ರ ತಂಡ ಈ ವಲಯದಲ್ಲಿ ಉಂಟಾದ ಹಾನಿಯ ಪ್ರಮಾಣವನ್ನು ಸಹ ಪರಿಶೀಲನೆ ನಡೆಸಲಿದೆ ಎಂದು ಜಿಲ್ಲಾಧಿಕಾರಿ ಯಶವಂತ ಗುರುಕರ್ ತಿಳಿಸಿದರು.

ಮತ್ತೊಂದು ತಂಡ ಹುಬ್ಬಳ್ಳಿಯ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಇನ್ನೂ 10 ದಿನಗಳೊಳಗೆ ಕೇಂದ್ರ ಸರ್ಕಾರಕ್ಕೆ ಹಾನಿ ಕುರಿತ ವರದಿ ಸಲ್ಲಿಸುವುದಾಗಿ ಕೇಂದ್ರ ತಂಡ ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com