ಧಾರವಾಡ: ಕನ್ನಡ ಚೆಕ್ ತಿರಸ್ಕರಿಸಿದ್ದ SBI ಗೆ 85 ಸಾವಿರ ರೂ. ದಂಡ!

ಕನ್ನಡದಲ್ಲಿ ಬರೆದ ಚೆಕ್ ಅನ್ನು ತಿರಸ್ಕರಿಸಿದ್ದಕ್ಕಾಗಿ ಧಾರವಾಡ ಜಿಲ್ಲಾ ಗ್ರಾಹಕರ ಪರಿಹಾರ ವೇದಿಕೆಯು ಉತ್ತರ ಕನ್ನಡ ಜಿಲ್ಲೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹಳಿಯಾಳ ಶಾಖೆಗೆ 85,177 ರೂ. ದಂಡ ವಿಧಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಧಾರವಾಡ: ಕನ್ನಡದಲ್ಲಿ ಬರೆದ ಚೆಕ್ ಅನ್ನು ತಿರಸ್ಕರಿಸಿದ್ದಕ್ಕಾಗಿ ಧಾರವಾಡ ಜಿಲ್ಲಾ ಗ್ರಾಹಕರ ಪರಿಹಾರ ವೇದಿಕೆಯು ಉತ್ತರ ಕನ್ನಡ ಜಿಲ್ಲೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹಳಿಯಾಳ ಶಾಖೆಗೆ 85,177 ರೂ. ದಂಡ ವಿಧಿಸಿದೆ.

ಹುಬ್ಬಳ್ಳಿಯ ರಾಜನಗರದ ಸರ್ಕಾರಿ ಪಿಯು ಕಾಲೇಜಿನ ಇಂಗ್ಲಿಷ್ ಉಪನ್ಯಾಸಕ ವಾದಿರಾಜಾಚಾರ್ಯ ಇನಾಮದಾರ್ ಅವರು, ಸಾಕಷ್ಟು ಬ್ಯಾಂಕ್ ಬ್ಯಾಲೆನ್ಸ್ ಇದ್ದರೂ ಕನ್ನಡದಲ್ಲಿ ಬರೆದಿದ್ದರಿಂದ 6 ಸಾವಿರ ರೂ. ಚೆಕ್ ಅನ್ನು ಬ್ಯಾಂಕ್ ತಿರಸ್ಕರಿಸಿದೆ ಎಂದು ದೂರು ನೀಡಿದ್ದು, ಗಂಭೀರವಾಗಿ ಪರಿಗಣಿಸಿದೆ.

ಫೋರಂ ಅಧ್ಯಕ್ಷ ಈಶಪ್ಪ ಭೂತೆ, ಸದಸ್ಯರಾದ ವಿ.ಎ.ಬೋಳಿಶೆಟ್ಟಿ ಮತ್ತು ಪಿ.ಸಿ.ಹಿರೇಮಠ ಅವರು ಸೆ.7ರಂದು ನೀಡಿದ ಆದೇಶದಲ್ಲಿ ಬ್ಯಾಂಕ್ 85,177 ರೂಪಾಯಿ ಪರಿಹಾರ ಮತ್ತು ದಂಡ ಪಾವತಿಸಬೇಕು ಎಂದು ಹೇಳಿದ್ದಾರೆ. ಬ್ಯಾಂಕ್‌ಗಳಲ್ಲಿ ತ್ರಿಭಾಷಾ ನೀತಿಯಡಿ ಪ್ರಾದೇಶಿಕ ಭಾಷೆಗಳ ಬಳಕೆಯನ್ನು ಎತ್ತಿ ಹಿಡಿದಿರುವ ತೀರ್ಪು ಮಹತ್ವ ಪಡೆದುಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com