ಎಸ್ ಡಿಪಿಐ ನಾಯಕ ರಿಯಾಜ್ ಫರಂಗಿಪೇಟೆ ಮನೆ ಮೇಲೆ ಎನ್ಐಎ ದಾಳಿ 

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ) ನಾಯಕ ರಿಯಾಜ್ ಫರಂಗಿಪೇಟೆ ಮನೆ ಮೇಲೆ ಎನ್ಐಎ ದಾಳಿ ನಡೆದಿದೆ. 
ಎನ್ಐಎ
ಎನ್ಐಎ

ಮಂಗಳೂರು: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ) ನಾಯಕ ರಿಯಾಜ್ ಫರಂಗಿಪೇಟೆ ಮನೆ ಮೇಲೆ ಎನ್ಐಎ ದಾಳಿ ನಡೆದಿದೆ. 

ಮಂಗಳೂರು ಹೊರ ಭಾಗದಲ್ಲಿರುವ ರಿಯಾಜ್ ಮನೆ ಮೇಲೆ ಎನ್ಐಎ ಪೊಲೀಸರು ದಾಳಿ ನಡೆಸಿದ್ದಾರೆ. ಆದರೆ ಈ ದಾಳಿ ಇತ್ತೀಚೆಗಷ್ಟೇ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ್ದಲ್ಲ ಎಂದು ದಕ್ಷಿಣ ಕನ್ನಡ ಎಸ್ ಪಿ ರಿಶಿಕೇಶ್ ಸೊನಾವಾನೆ ಸ್ಪಷ್ಟಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸುತ್ತಿದ್ದ ಆರೋಪದಡಿ ಬಿಹಾರದಲ್ಲಿ ಇಬ್ಬರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com