ಎಸಿಬಿ ರದ್ದುಗೊಳಿಸಿ, ಲೋಕಾಯುಕ್ತಕ್ಕೆ ಪೊಲೀಸ್ ಠಾಣಾಧಿಕಾರ: ಸರ್ಕಾರದಿಂದ ಅಧಿಸೂಚನೆ

ಹೈಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಶುಕ್ರವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಯನ್ನು ರದ್ದುಗೊಳಿಸಿ ಆಧಿಸೂಚನೆ ಹೊರಡಿಸಿದೆ. ಅಲ್ಲದೆ ಲೋಕಾಯುಕ್ಕೆ ಪೊಲೀಸ್ ಠಾಣಾಧಿಕಾರ ನೀಡಿ, ಎಸಿಬಿಯ ಎಲ್ಲಾ ಪ್ರಕರಣಗಳನ್ನು...
ಲೋಕಾಯುಕ್ತ
ಲೋಕಾಯುಕ್ತ

ಬೆಂಗಳೂರು: ಹೈಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಶುಕ್ರವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಯನ್ನು ರದ್ದುಗೊಳಿಸಿ ಆಧಿಸೂಚನೆ ಹೊರಡಿಸಿದೆ. ಅಲ್ಲದೆ ಲೋಕಾಯುಕ್ಕೆ ಪೊಲೀಸ್ ಠಾಣಾಧಿಕಾರ ನೀಡಿ, ಎಸಿಬಿಯ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಿದೆ.

ಎಸಿಬಿಯನ್ನು ರದ್ದುಗೊಳಿಸಿ ಹಿಂದಿನಂತೆ ಲೋಕಾಯುಕ್ತ ಸಂಸ್ಥೆಯನ್ನು ಮತ್ತಷ್ಟು ಬಲಪಡಿಸುವಂತೆ  ಆಗಸ್ಟ್ 11ರಂದು ಹೈಕೋರ್ಟ್ ಆದೇಶ ನೀಡಿತ್ತು.

ಹೈಕೋರ್ಟ್ ತೀರ್ಪಿನಲ್ಲಿನ ಅಂಶಗಳನ್ನು ಪರಿಶೀಲಿಸಿದ ರಾಜ್ಯ ಸರ್ಕಾರ ಈ, ಕೆಳಕಂಡಂತೆ ಆದೇಶಿಸಿದೆ.

1. ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರವನ್ನು ರದ್ದುಗೊಳಿಸಿದೆ.

2. ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಭ್ರಷ್ಟಾಚಾರ ತಡೆ ಅಧಿನಿಯಮ ಸಂಪೂರ್ಣ ಅಧಿಕಾರ ನೀಡಲಾಗಿದೆ.

3. ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಪೊಲೀಸ್ ಠಾಣಾಧಿಕಾರ ನೀಡಲಾಗಿದೆ.

4. ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಪುಸ್ತುತ ಬಾಕಿಯಿರುವ ತನಿಖೆಗಳು ವಿಚಾರಣೆಗಳು/ಇತರೆ ಶಿಸ್ತು ಪ್ರಕರಣಗಳು ಹಾಗೂ ಖಾಸಗಿ ದೂರುದಾರರ ಪ್ರಕರಣಗಳನ್ನು ಸಂಪೂರ್ಣವಾಗಿ ಲೋಕಾಯುಕ್ತಕ್ಕೆ ವರ್ಗಾಯಿಸುವುದು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com