ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ670 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,57,589ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40215ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 337 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1868079ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 730 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4013063ಕ್ಕೆ ಏರಿಕೆಯಾಗಿದೆ. ಇನ್ನು 4269 ಸಕ್ರಿಯ ಪ್ರಕರಣಗಳಿವೆ.
Advertisement