ಬೆಂಗಳೂರಿಗೆ ಬಂದು ಲಾಲ್ ಬಾಗ್ ಉದ್ಯಾನವನ ಸುತ್ತು ಹಾಕಿದ್ದ ಬ್ರಿಟನ್ ರಾಣಿ ಎಲಿಜಬೆತ್, ವಿಡಿಯೊ ಹಂಚಿಕೊಂಡ ಯದುವೀರ್ ಒಡೆಯರ್
ವಯೋಸಹಜ ಕಾಯಿಲೆಯಿಂದ ತಮ್ಮ 96ನೇ ಇಳಿವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಇಂಗ್ಲೆಂಡ್ ರಾಣಿ 2ನೇ ಎಲಿಜಬೆತ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಪರೂಪದ ವಿಡಿಯೊ ಹಂಚಿಕೊಂಡಿದ್ದಾರೆ.
Published: 09th September 2022 01:11 PM | Last Updated: 09th September 2022 04:51 PM | A+A A-

ಅಂದಿನ ಮೈಸೂರು ಮಹಾರಾಜ ಜಯಚಾಮರಾಜೇಂದ್ರ ಒಡೆಯರ್ ಬ್ರಿಟನ್ ರಾಣಿಗೆ ಸ್ವಾಗತ ನೀಡಿದ್ದು
ಮೈಸೂರು: ವಯೋಸಹಜ ಕಾಯಿಲೆಯಿಂದ ತಮ್ಮ 96ನೇ ಇಳಿವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಇಂಗ್ಲೆಂಡ್ ರಾಣಿ 2ನೇ ಎಲಿಜಬೆತ್ (Queen Elizabeth) ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಪರೂಪದ ವಿಡಿಯೊ ಹಂಚಿಕೊಂಡಿದ್ದಾರೆ.
ಅದು ಕ್ವೀನ್ ಎಲಿಜಬೆತ್ ಅವರು ಬೆಂಗಳೂರಿಗೆ ಭೇಟಿ ನೀಡಿದ್ದ ಸಮಯ. ತಮ್ಮ ಅಜ್ಜ ಮಹಾರಾಜ ಜಯಚಾಮರಾಜೇಂದ್ರ ಒಡೆಯರ್ರೊಂದಿಗೆ ಸುತ್ತಾಡಿದ್ದು, ಬೆಂಗಳೂರಿಗೆ ಬಂದಿದ್ದು, ಲಾಲ್ ಬಾಗ್ ಕಬ್ಬನ್ ಪಾರ್ಕ್ ಭೇಟಿಯ ವಿಡಿಯೊ ಹಂಚಿಕೊಂಡಿದ್ದಾರೆ.
ಇಂಗ್ಲೆಂಡಿನ ರಾಣಿ ಎಲಿಜಬೆತ್-II, 1950 ರ ದಶಕದ ಉತ್ತರಾರ್ಧದಲ್ಲಿ ಬೆಂಗಳೂರಿಗೆ ಭೇಟಿ ನೀಡಿದ್ದರು. ಆಗ ಅಂದಿನ ರಾಜ್ಯಪಾಲರು ಮತ್ತು ಮೈಸೂರು ರಾಜ್ಯದ ಮಹಾರಾಜರಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರನ್ನು ಭೇಟಿ ಮಾಡಿದ್ದರು.