ದೋಣಿಯಲ್ಲಿ ತೆರಳಿ ಪ್ರವಾಹ ಪರಿಸ್ಥಿತಿ ವೀಕ್ಷಿಸಿದ ಸಿದ್ದರಾಮಯ್ಯ: ಶ್ವೇತ ಪತ್ರ ಹೊರಡಿಸಲು ಮಾಜಿ ಸಿಎಂ ಆಗ್ರಹ

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿದ್ದರಾಮಯ್ಯ ಅವರು ದೋಣಿಯಲ್ಲಿ ತೆರಳಿ ಎಪ್ಸಿಲಾನ್ ವಿಲ್ಲಾ ಮತ್ತು ರೇನ್‌ಬೋ ಡ್ರೈವ್ ಲೇಔಟ್‌ಗೆ ಭೇಟಿ ನೀಡಿದರು.
ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿದ್ದರಾಮಯ್ಯ  ಭೇಟಿ
ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿದ್ದರಾಮಯ್ಯ ಭೇಟಿ

ಬೆಂಗಳೂರು: ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿದ್ದರಾಮಯ್ಯ ಅವರು ದೋಣಿಯಲ್ಲಿ ತೆರಳಿ ಎಪ್ಸಿಲಾನ್ ವಿಲ್ಲಾ ಮತ್ತು ರೇನ್‌ಬೋ ಡ್ರೈವ್ ಲೇಔಟ್‌ಗೆ ಭೇಟಿ ನೀಡಿದರು.

ಮೂರು ದಿನಗಳ ಹಿಂದೆ ವೈಟ್‌ಫೀಲ್ಡ್ ಸಮೀಪದ ಸಿದ್ದಾಪುರದ ಬಳಿ ವಿದ್ಯುತ್ ಅವಘಡದಿಂದ ಮೃತಪಟ್ಟ ಅಖಿಲಾ ಅವರ ಪೋಷಕರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.

ಸದ್ಯ ಅಸ್ಥಿತ್ವದಲ್ಲಿರುವ ಬಸವರಾಜ ಬೊಮ್ಮಾಯಿ ಸರ್ಕಾರ ಪ್ರವಾಹದ ಹೊಣೆಯನ್ನು ಕಾಂಗ್ರೆಸ್ ಮೇಲೆ ಹೊರಿಸಲು ಪ್ರಯತ್ನಿಸುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು. ನಾನು ಸಿಎಂ ಆಗಿದ್ದ ಅವಧಿಯಲ್ಲಿ ಅತಿಕ್ರಮಣಗಳನ್ನು ಗುರುತಿಸಿ ತೆರವುಗೊಳಿಸಲು ಪ್ರಯತ್ನಿಸಲಾಗಿತ್ತು. ಆದರೆ ಮೂರು ವರ್ಷಗಳ ಹಿಂದೆ ಬಿಜೆಪಿ ಅಧಿಕಾರಕ್ಕೆ ಬಂದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಬಿಜೆಪಿ ಸರಕಾರ ಕ್ಷಿಪ್ರವಾಗಿ ಕಾರ್ಯ ನಿರ್ವಹಿಸಿದ್ದರೆ, ಹಾನಿಯನ್ನು ತಪ್ಪಿಸಬಹುದಿತ್ತು ಎಂದಿದ್ದಾರೆ.

ಮಳೆನೀರು ಚರಂಡಿಗಳ ಒತ್ತುವರಿ ತೆರವಿಗೆ ಸರಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು. ಮುಂದಿನ ಸೋಮವಾರದಿಂದ ಆರಂಭವಾಗುವ ವಿಧಾನ ಮಂಡಲ ಜಂಟಿ ಅಧಿವೇಶನದಲ್ಲಿ ಬೆಂಗಳೂರು ನಗರ ಹಾಗೂ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿರುವ ಅನಾಹುತಕ್ಕೆ ಪರಿಹಾರ ಕಲ್ಪಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಹೋರಾಟ ಕೈಗೊಳ್ಳಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ.

ಏತನ್ಮಧ್ಯೆ, ಔಟರ್ ರಿಂಗ್ ರೋಡ್ ಕಂಪನಿಗಳ ಸಂಘ ORRCA ಮಾಧ್ಯಮಗಳೊಂದಿಗೆ ಪತ್ರವನ್ನು ಹಂಚಿಕೊಂಡಿದ್ದು, ಸರ್ಕಾರಗಳು ಗುಂಡಿಗಳನ್ನು ಸರಿಪಡಿಸಲು ಮತ್ತು ಹೊರ ವರ್ತುಲ ರಸ್ತೆಯ ಪ್ರವಾಹವನ್ನು ತಡೆಯಲು ಮಾಡಿದ ಮನವಿಯನ್ನು ಹೇಗೆ ನಿರ್ಲಕ್ಷಿಸಿದೆ ಎಂಬುದನ್ನು ಎತ್ತಿ ತೋರಿಸುತ್ತದೆ ಎಂದಿದ್ದಾರೆ. 2017ರಲ್ಲಿಯೇ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, ಸಿದ್ದರಾಮಯ್ಯನವರೇ ಆಡಳಿತದ ಚುಕ್ಕಾಣಿ ಹಿಡಿದಿದ್ದು ಕುತೂಹಲ ಮೂಡಿಸಿದೆ ಎಂದು ಸದಸ್ಯರೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com