ಕಲಬುರಗಿ: ಕಲುಷಿತ ನೀರು ಕುಡಿದು 51 ಮಂದಿ ಅಸ್ವಸ್ಥ!

ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮದಲ್ಲಿ ಕಳೆದ 24 ಗಂಟೆಗಳಲ್ಲಿ ಗ್ಯಾಸ್ಟ್ರೋಎಂಟರೈಟಿಸ್‌ನಿಂದಾಗಿ 51 ಮಂದಿ ಅಸ್ವಸ್ಥರಾಗಿದ್ದಾರೆ ಎಂದು ಆರೋಗ್ಯಾಧಿಕಾರಿ ಡಾ. ಸಿದ್ದು ಪಾಟೀಲ್ ಹೇಳಿದ್ದಾರೆ.
ಕಲಬುರಗಿ: ಕಲುಷಿತ ನೀರು ಕುಡಿದು 51 ಮಂದಿ ಅಸ್ವಸ್ಥ!

ಕಲಬುರಗಿ: ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮದಲ್ಲಿ ಕಳೆದ 24 ಗಂಟೆಗಳಲ್ಲಿ ಗ್ಯಾಸ್ಟ್ರೋಎಂಟರೈಟಿಸ್‌ನಿಂದಾಗಿ 51 ಮಂದಿ ಅಸ್ವಸ್ಥರಾಗಿದ್ದಾರೆ ಎಂದು ಆರೋಗ್ಯಾಧಿಕಾರಿ ಡಾ. ಸಿದ್ದು ಪಾಟೀಲ್ ಹೇಳಿದ್ದಾರೆ.

ದಿ ನ್ಯೂಸ್ ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಮಾತನಾಡಿದ ಸಿದ್ದು ಅವರು, ನಿನ್ನೆ ಸಂಜೆಯಿಂದ ಮಂದೇವಾಲ್ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವಾಂತಿಭೇದಿ ಮತ್ತು ಲೂಸ್ ಮೋಷನ್ ನಿಂದಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಶನಿವಾರ ಮಧ್ಯಾಹ್ನದವರೆಗೆ ಒಟ್ಟು 51 ಜನರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಸಿದ್ದು ಪಾಟೀಲ್ ಹೇಳಿದರು. 51 ರೋಗಿಗಳಲ್ಲಿ 13 ಮಂದಿ ಮಂದೇವಾಳ ಪಿಎಚ್‌ಸಿ, 22 ಮಂದಿ ಜೇವರ್ಗಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಹಾಗೂ 8 ಮಂದಿ ಕಲಬುರಗಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದರು.

ಗ್ಯಾಸ್ಟ್ರೋಎಂಟರೈಟಿಸ್‌ನಿಂದಾಗಿ ಮಂದೇವಾಲದ 74 ವರ್ಷದ ತಾಯಪ್ಪ ಎಂಬುವರು ಸಾವನ್ನಪ್ಪಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದರು. ಇದಕ್ಕೆ ಸಿದ್ದು ಪಾಟೀಲ್ ಅವರು ತಾಯಪ್ಪ ವಯೋಸಹಜ ಕಾಯಿಲೆಗಳಿಂದ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ಗ್ಯಾಸ್ಟ್ರೋಎಂಟರೈಟಿಸ್‌ ಬರಲು ಕಲುಷಿತ ನೀರಿನ ಸೇವನೆಯೇ ಪ್ರಮುಖ ಕಾರಣ ಎಂದು ಮೂಲಗಳು ತಿಳಿಸಿವೆ. ಕೊಳವೆ ಬಾವಿ ನೈರ್ಮಲ್ಯ ಪ್ರದೇಶದಲ್ಲಿದೆ. ಇದಲ್ಲದೇ ಈ ವರ್ಷ ಜೂನ್ ತಿಂಗಳಲ್ಲಿ ಸರ್ಕಾರಕ್ಕೆ ಸಲ್ಲಿಸಿರುವ ಪ್ರಯೋಗಾಲಯ ಪರೀಕ್ಷೆಯ ವರದಿಯಂತೆ ನೀರು ಕುಡಿಯಲು ಯೋಗ್ಯವಾಗಿಲ್ಲ. ಡಾ. ಸಿದ್ದು ಪಾಟೀಲ್ ಹೇಳಿದ್ದು ಹೀಗಾಗಿ ಸುಭದ್ರ ನೀರು ಒದಗಿಸುವಂತೆ ತಮ್ಮ ಕಚೇರಿಯು ಗ್ರಾಮ ಪಂಚಾಯಿತಿಗೆ ಪತ್ರ ಬರೆದಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com