ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಪೋಷಕರ ಪರಸ್ಪರ ಸಂಧಾನ: ಅಪ್ರಾಪ್ತ ಬಾಲಕನ ವಿರುದ್ಧದ ಪೋಕ್ಸೋ ಪ್ರಕರಣ ಮುಕ್ತಾಯಗೊಳಿಸಿದ ಹೈಕೋರ್ಟ್!

ಸಂತ್ರಸ್ಥ ಅಪ್ರಾಪ್ತ ಬಾಲಕಿಯ ಪೋಷಕರ ನಡುವೆ ಸಂಧಾನ ಏರ್ಪಟ್ಟ ಹಿನ್ನಲೆಯಲ್ಲಿ ಐಪಿಸಿ ಅಡಿಯಲ್ಲಿ ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಯಡಿ ಲೈಂಗಿಕ ದೌರ್ಜನ್ಯ ಕಾಯ್ದೆಗಳಡಿ ಆಪ್ರಾಪ್ತ ಬಾಲಕನ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ಮುಕ್ತಾಯಗೊಳಿಸಿದೆ.

ಬೆಂಗಳೂರು: ಸಂತ್ರಸ್ಥ ಅಪ್ರಾಪ್ತ ಬಾಲಕಿಯ ಪೋಷಕರ ನಡುವೆ ಸಂಧಾನ ಏರ್ಪಟ್ಟ ಹಿನ್ನಲೆಯಲ್ಲಿ ಐಪಿಸಿ ಅಡಿಯಲ್ಲಿ ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಯಡಿ ಲೈಂಗಿಕ ದೌರ್ಜನ್ಯ ಕಾಯ್ದೆಗಳಡಿ ಆಪ್ರಾಪ್ತ ಬಾಲಕನ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ಮುಕ್ತಾಯಗೊಳಿಸಿದೆ.

ಸಂತ್ರಸ್ತೆ ಮತ್ತು ಆರೋಪಿಯ ಪೋಷಕರು ರಾಜೀ ಮಾಡಿಕೊಂಡ ಹಿನ್ನೆಲೆಯಲ್ಲಿ ಹೈಕೋರ್ಟ್ ಬಾಲಕನೋರ್ವನ ವಿರುದ್ಧದ ಪೋಕ್ಸೋ ಪ್ರಕರಣವನ್ನು ಕೋರ್ಟ್ ಮುಕ್ತಾಯ ಮಾಡಿದೆ. ಪ್ರಕರಣ ರದ್ದು ಕೋರಿ ಬಾಲಕನ ಆತನ ತಂದೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ಮಾಡಿದೆ. 

''ಸಂತ್ರಸ್ತೆ ಮತ್ತು ಆರೋಪಿಯ ಪೋಷಕರ ನಡುವೆ ಸಂಧಾನ ಏರ್ಪಟ್ಟಿದೆ. ಒಂದೇ ತರಗತಿಯಲ್ಲಿ ಓದುತ್ತಿದ್ದ ಆರೋಪಿ ಹಾಗೂ ಸಂತ್ರಸ್ತೆ ಸ್ನೇಹಿತರಾಗಿದ್ದರು. ಇಬ್ಬರ ನಡುವೆ ಮೂಡಿದ್ದ ಆಕರ್ಷಣೆಯಿಂದ ಈ ರೀತಿ ನಡೆದಿದೆ. ಪರಸ್ಪರ ಪ್ರೀತಿಸುತ್ತಿದ್ದ ಅವರು, ಮನೆಬಿಟ್ಟು ಚಿಕ್ಕಮಗಳೂರಿಗೆ ತೆರಳಿದ್ದರು. ಸಂತ್ರಸ್ತೆಯೊಂದಿಗೆ ಪ್ರೀತಿಯಲ್ಲಿರುವ ಆರೋಪಿಯನ್ನು ಶಿಕ್ಷಿಸುವುದು ಪೋಕ್ಸೋ ಕಾಯ್ದೆಯ ಉದ್ದೇಶವಲ್ಲ''ಎಂದು ನ್ಯಾಯಾಲಯ ಹೇಳಿದೆ. ಅಲ್ಲದೆ, 10ರಿಂದ 16 ವರ್ಷಗಳು ಹದಿಹರೆಯ ವಯಸ್ಸಾಗಿದ್ದು, ಯೌವ್ವನದಿಂದ ವಯಸ್ಕ ಹಂತಕ್ಕೆ ಮಗು ರೂಪಾಂತರವಾಗುವ ಸಮಯ. ಇಂತಹ ಸಂದರ್ಭದಲ್ಲಿ ತಮ್ಮ ನಡವಳಿಕೆಯಿಂದ ಮುಂದಾಗುವ ಪರಿಣಾಮಗಳ ಬಗ್ಗೆ ಮಕ್ಕಳು ನಿರ್ಲಕ್ಷ್ಯವಹಿಸುತ್ತಾರೆ. ಹದಿಹರೆಯದ ಹುಡುಗಿ-ಹುಡುಗನ ಮಧ್ಯೆ ಆಕರ್ಷಣೆಯಿಂದ ಬೆಳೆಯುವ ಪ್ರೀತಿ ಹುಡುಗನನ್ನು ಪೋಕ್ಸೋ ಕಾಯ್ದೆಯ ನಿಯಮಗಳಡಿ ಇಕ್ಕಟ್ಟಿಗೆ ಸಿಲುಕಿಸುತ್ತದೆ. ಹದಿಹರೆಯದವರು ಕಾನೂನಿನ ಪರಿಣಾಮಗಳ ಅರಿವಿನ ಕೊರತೆಯಿಂದ ಇಂತಹ ಕೃತ್ಯಗಳಲ್ಲಿ ಸಿಲುಕಿಕೊಂಡರೆ ಕೋರ್ಟ್ ಮುಕ್ತ ಮನಸ್ಸಿನಿಂದ ನೋಡಬೇಕಾಗುತ್ತದೆ'' ಎಂದು ಪೀಠ ಅಭಿಪ್ರಾಯಪಟ್ಟಿದೆ.

ಯುವಕರ ಉನ್ಮಾದದಲ್ಲಿ ಈ ಕೃತ್ಯ ಎಸಗಲಾಗಿದೆ ಎಂದು ನ್ಯಾಯಾಧೀಶರು ಗಮನಿಸಿದರು ಮತ್ತು ಅಂತಹ ಕೃತ್ಯಗಳು ಉಲ್ಬಣಗೊಂಡ ಲೈಂಗಿಕ ದೌರ್ಜನ್ಯಕ್ಕಿಂತ ಸಂಪೂರ್ಣವಾಗಿ ಭಿನ್ನವಾಗಿವೆ. ಅಪ್ರಾಪ್ತ ವಯಸ್ಸಿನ ಮತ್ತು ವ್ಯಾಮೋಹಕ್ಕೆ ಒಳಗಾಗುವ ವಿದ್ಯಾರ್ಥಿಗಳಿಗೆ ಕಾಯಿದೆಯ ನಿಬಂಧನೆಗಳು ತಿಳಿದಿಲ್ಲ. ವಾರ್ಡ್‌ಗಳ ಪೋಷಕರು ದೂರು ದಾಖಲಿಸಲು ಮುಂದೆ ಬರುತ್ತಾರೆ, ಆಗಾಗ್ಗೆ ವಿವಾದವನ್ನು ಇತ್ಯರ್ಥಪಡಿಸುತ್ತಾರೆ. ಅಂತಿಮವಾಗಿ ಪ್ರಕರಣದ ದಾಖಲೆಗಳ ಹಾಗೂ ಆರೋಪಿಯ ಪರೀಕ್ಷಾ ಅಂಕಪಟ್ಟಿ ನೋಡಿದರೆ ಆತ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದಾನೆ. ಪೋಷಕರೇ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಲು ನಿರ್ಧರಿಸಿದ್ದಾರೆ. ಇಂತಹ ವಾಸ್ತವ ಪರಿಸ್ಥಿತಿ ಪರಿಗಣಿಸಿ, ಪೋಷಕರ ರಾಜೀ ನಿರ್ಧಾರವನ್ನು ಒಪ್ಪಿಕೊಂಡು ಆರೋಪಿಯನ್ನು ಪ್ರಕರಣದಿಂದ ಮುಕ್ತಗೊಳಿಸುವುದು ಸೂಕ್ತ. ತಪ್ಪಿದರೆ ಆರೋಪಿಯ ಭವಿಷ್ಯ ಅಪಾಯಕ್ಕೆ ಸಿಲುಕಲಿದೆ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.

ಅರ್ಜಿದಾರರ ಪರ ವಕೀಲರು, ಹಲವು ಸುತ್ತಿನ ಕೌನ್ಸೆಲಿಂಗ್ ಬಳಿಕ ಆರೋಪಿ ಮತ್ತು ಸಂತ್ರಸ್ತೆಯ ಕುಟುಂಬದವರು ಪ್ರಕರಣವನ್ನು ಸುಖಾಂತ್ಯಗೊಳಿಸಲು ನಿರ್ಧರಿಸಿದ್ದಾರೆ. ಅಪ್ರಾಪ್ತರಿಬ್ಬರ ಭವಿಷ್ಯದ ದೃಷ್ಟಿಯಿಂದ ಪ್ರಕರಣ ಮುಂದುವರಿಸದಿರುವ ನಿರ್ಧಾರಕ್ಕೆ ಬಂದಿದ್ದಾರೆ. ಆದ್ದರಿಂದ, ತನಿಖಾ ಪ್ರಕ್ರಿಯೆ ಕೈಬಿಡಲು ಆದೇಶಿಸಬೇಕು ಎಂದು ಕೋರಿದ್ದರಲ್ಲದೆ, ಇಂತಹ ಪ್ರಕರಣಗಳಲ್ಲಿ ವಿವಿಧ ನ್ಯಾಯಾಲಗಳು ನೀಡಿರುವ ತೀರ್ಪುಗಳ ಬಗ್ಗೆ ಗಮನ ನ್ಯಾಯಾಲಯದ ಗಮನ ಸೆಳೆದರು. ಪ್ರಾಸಿಕ್ಯೂಷನ್ ಪರ ವಕೀಲರು ಆಕ್ಷೇಪಿಸಿ, ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಅಪರಾಧ ಪ್ರಕರಣ ಇದಾಗಿದೆ. ಹಾಗಾಗಿ, ಇಲ್ಲಿ ಸಂಧಾನಕ್ಕೆ ಅವಕಾಶ ಇಲ್ಲ, ಪ್ರಕರಣ ರದ್ದುಪಡಿಸಬಾರದು ಎಂದು ಕೋರಿದರು.

ಏನಿದು ಪ್ರಕರಣ?
ಸಂತ್ರಸ್ತೆ ಹಾಗೂ ಆರೋಪಿಯ ಪೋಷಕರು ರಾಜಿಮಾಡಿಕೊಂಡಿರುವುದನ್ನು ಪರಿಗಣಿಸಿ ಕಳೆದ ವರ್ಷ ನವೆಂಬರ್ 21ರಂದು ಕಾಲೇಜಿಗೆ ತೆರಳಿದ್ದ ಪುತ್ರಿ ಮನೆಗೆ ಮರಳಿಲ್ಲ ಎಂದು ಅಪ್ರಾಪ್ತೆಯ ತಂದೆ ದೂರು ನೀಡಿದ್ದರು. ದೂರಿನ ಆಧಾರದಲ್ಲಿ ಪೊಲೀಸರು ಆರೋಪಿ ಮತ್ತು ಸಂತ್ರಸ್ತೆಯ ಫೋನ್ ಟ್ರ್ಯಾಕ್ ಮಾಡಿ ಇಬ್ಬರನ್ನೂ ಪತ್ತೆ ಹಚ್ಚಿದ್ದರು. ಬಳಿಕ, ಆರೋಪಿ ಬಾಲಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದರು. ಇದೀಗ ಸಂತ್ರಸ್ತೆ ಮತ್ತು ಆರೋಪಿಯ ಪೋಷಕರು ಪ್ರಕರಣಕ್ಕೆ ಮುಕ್ತಾಯಗೊಳಿಸಲು ವಿಚಾರಣೆ ರದ್ದುಪಡಿಸುವಂತೆ ಹೈಕೋರ್ಟ್‌ ಮೊರೆ ಹೋಗಿದ್ದರು.
 

Related Stories

No stories found.

Advertisement

X
Kannada Prabha
www.kannadaprabha.com