ಬೆಂಗಳೂರು: ಬಿಬಿಎಂಪಿ ಪಶ್ಚಿಮ ವಲಯ ಕಚೇರಿ ಮೇಲೆ ಲೋಕಾಯುಕ್ತ ದಾಳಿ; 4 ಲಕ್ಷ ರೂ. ಲಂಚದ ಹಣ ವಶ

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಪಶ್ಚಿಮ ವಲಯ ಕಚೇರಿ ಮೇಲೆ ಸೋಮವಾರ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ಮಾಡಿದೆ.
ಕರ್ನಾಟಕ ಲೋಕಾಯುಕ್ತ
ಕರ್ನಾಟಕ ಲೋಕಾಯುಕ್ತ

ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಪಶ್ಚಿಮ ವಲಯ ಕಚೇರಿ ಮೇಲೆ ಸೋಮವಾರ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ಮಾಡಿದೆ.

ಎಸಿಬಿ ರದ್ದುಗೊಳಿಸಿ ಲೋಕಾಯುಕ್ತಕ್ಕೆ ಪೊಲೀಸ್ ಠಾಣಾಧಿಕಾರಿ ನೀಡಿದ ನಂತರ ನಡೆದ ಮೊದಲ ದಾಳಿ ಇದಾಗಿದ್ದು, ಇಂದು ಬಿಬಿಎಂಪಿ ಪಶ್ಚಿಮ ವಲಯ ಜಂಟಿ ಆಯುಕ್ತ ಶ್ರೀನಿವಾಸ್ ಕಚೇರಿ ಮೇಲೆ ಲೋಕಾಯುಕ್ತ ಡಿವೈಎಸ್​ಪಿಗಳಾದ ಮಂಜಯ್ಯ, ಶಂಕರ್‌ ನಾರಾಯಣ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ದಾಳಿ ವೇಳೆ 4 ಲಕ್ಷ ರೂಪಾಯಿ ಲಂಚದ ಹಣವನ್ನೂ ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ.

ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ದೂರು ನೀಡಲಾಗಿತ್ತು. ಈ ದೂರಿನ ಅನ್ವಯವೇ ದಾಳಿ ನಡೆಸಲಾಗಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com