ರಾಜಕಾಲುವೆ ಒತ್ತುವರಿ ಮಾಡಿಕೊಂಡವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಬೊಮ್ಮಾಯಿ

ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಕಟ್ಟಡ, ಲೇಔಟ್, ವಸತಿ ಸಮುಚ್ಛಯಗಳನ್ನು ನಿರ್ಮಿಸಿದ ಕಾರಣ, ಮಳೆ ನೀರು ಸರಾಗವಾಗಿ ಹರಿಯದೇ ಬಳಹಷ್ಟು ತೊಂದರೆಗಳಾಗಿವೆ. ಹಾಗಾಗಿ ಈ ಕೃತ್ಯ ಯಾರೇ ಎಸಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

ಐಟಿಬಿಟಿ ಕಂಪೆನಿಗಳು, ಜನಸಾಮಾನ್ಯರು ಮಳೆನೀರಿನಲ್ಲಿ ಸಿಲುಕಿ ಪರದಾಡುವಂತಾಯಿತು. ಐಟಿಬಿಟಿ ವಲಯದವರೂ ಒತ್ತುವರಿ ಮಾಡಿಕೊಂಡಿದ್ದಲ್ಲಿ ಅವರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ರಾಜಕಾಲುವೆಗೆ ಹೆಚ್ಚಿನ ಪ್ರಾಶಸ್ತ್ಯ ಕೊಡುತ್ತೇವೆ. ಇಷ್ಟು ದಿನ ಬಿಟ್ಟು ಬಿಟ್ಟು ಕೆಲಸ ಮಾಡಲಾಗುತ್ತಿತ್ತು. ಇನ್ನು ಮುಂದೆ ನಿರಂತರವಾಗಿ ರಾಜಕಾಲುವೆ ಕಾಮಗಾರಿ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com