ಹೆಚ್ ಡಿ ಕುಮಾರಸ್ವಾಮಿ
ಹೆಚ್ ಡಿ ಕುಮಾರಸ್ವಾಮಿ

ರಾಜ್ಯದ ಜನತೆಯ ತೆರಿಗೆ ಹಣದಲ್ಲಿ 'ಹಿಂದಿ ದಿವಸ' ಆಚರಿಸಬೇಡಿ: ಮುಖ್ಯಮಂತ್ರಿಗೆ ಹೆಚ್ ಡಿ ಕುಮಾರಸ್ವಾಮಿ ಪತ್ರದ ಮೂಲಕ ಆಗ್ರಹ

ಕರ್ನಾಟಕದಲ್ಲಿ ಹಿಂದಿ ದಿನ (Hindi Diwas)​ ಆಚರಿಸುವುದು ಬೇಡ, ಈ ಮೂಲಕ ಜನರ ತೆರಿಗೆ ಹಣವನ್ನು ನಿಷ್ಪ್ರಯೋಜಕಗೊಳಿಸುವುದು ಬೇಡ ಎಂದು  ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ (HD Kumaraswamy) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ಹಿಂದಿ ದಿನ (Hindi Diwas)​ ಆಚರಿಸುವುದು ಬೇಡ, ಈ ಮೂಲಕ ಜನರ ತೆರಿಗೆ ಹಣವನ್ನು ನಿಷ್ಪ್ರಯೋಜಕಗೊಳಿಸುವುದು ಬೇಡ ಎಂದು  ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ (HD Kumaraswamy) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸಿದ್ದಾರೆ.

ಸಾವಿರಾರು  ಭಾಷೆ, ಉಪ ಭಾಷೆಗಳನ್ನು ಹೊಂದಿರುವ ಸಾಮಾಜಿಕ, ಸಾಂಸ್ಕೃತಿಕವಾಗಿ ವೈವಿಧ್ಯತೆ ಹೊಂದಿರುವ ಭಾರತ ದೇಶದಲ್ಲಿ ಒಂದು ಭಾಷೆಯನ್ನು ಮಾತ್ರ ಮೆರೆಸುವುದು ನಿಜಕ್ಕೂ ಜನತೆಗೆ ಎಸಗುವ ಪರಮ ಅನ್ಯಾಯವಾಗಿದೆ ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 14ರಂದು ಭಾರತ ಒಕ್ಕೂಟ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮವಾದ ಹಿಂದಿ ದಿವಸವನ್ನು ಕರ್ನಾಟಕದಲ್ಲಿ ಒತ್ತಾಯಪೂರ್ವಕವಾಗಿ ಆಚರಿಸುವುದು ರಾಜ್ಯ ಸರ್ಕಾರವು ಕನ್ನಡಿಗರಿಗೆ ಮಾಡುವ ಅನ್ಯಾಯವಾಗಿದೆ. ಕರ್ನಾಟಕ ಸರ್ಕಾರದ ವತಿಯಿಂದ ನಮ್ಮ ರಾಜ್ಯದ ಜನತೆಯ ತೆರಿಗೆ ಹಣದಲ್ಲಿ ಯಾವುದೇ ಕಾರಣಕ್ಕೂ ಹಿಂದಿ ದಿವಸ ಆಚರಣೆ ಮಾಡಬಾರದೆಂದು ಆಗ್ರಹಿಸುತ್ತೇನೆ’ ಎಂದು ಅವರು ಒತ್ತಾಯಿಸಿದ್ದಾರೆ.

ಹಿಂದಿ ದಿನ ಆಚರಣೆ: ಹಿಂದಿಯನ್ನು ರಾಷ್ಟ್ರಭಾಷೆಯನ್ನಾಗಿ ಜಾರಿಗೆ ತರಬೇಕು ಎಂಬ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವ್ಯೋಹರ್ ರಾಜೇಂದ್ರ ಸಿಂಹ ಅವರ 50ನೇ ಹುಟ್ಟುಹಬ್ಬವಾದ ಸೆಪ್ಟೆಂಬರ್ 14ರಂದು ಹಿಂದಿಯನ್ನು ಕೇಂದ್ರ ಸರ್ಕಾರದ ಆಡಳಿತ ಭಾಷೆಯಾಗಿ ಘೋಷಿಸಲಾಯಿತು. ವ್ಯೂಹರ್ ಸಿಂಹ ಅವರ ಸ್ಮರಣಾರ್ಥವಾಗಿ ಪ್ರತಿವರ್ಷ ಸೆಪ್ಟೆಂಬರ್ 14ರಂದು ‘ಹಿಂದಿ ದಿವಸ್’ ಆಚರಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿತು.

Related Stories

No stories found.

Advertisement

X
Kannada Prabha
www.kannadaprabha.com