ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಸೆ.16ಕ್ಕೆ ಮುಂದೂಡಿಕೆ

ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 16ಕ್ಕೆ..
ಮುರುಘಾ ಶ್ರೀಗಳು
ಮುರುಘಾ ಶ್ರೀಗಳು

ಚಿತ್ರದುರ್ಗ: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 16ಕ್ಕೆ ಮುಂದೂಡಲಾಗಿದೆ.

ಜಾಮೀನು ಕೋರಿ ಶ್ರೀಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ಕೋರ್ಟ್, ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.

ಪೋಕ್ಸೊ ಕಾಯ್ದೆಯಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ.

ಇದೇ ಕೇಸ್​ನಲ್ಲಿ ಎ2 ಲೇಡಿ ವಾರ್ಡನ್ ನ್ಯಾಯಾಂಗ ಬಂಧನ ಅವಧಿ ಕೂಡ ವಿಸ್ತರಣೆ ಮಾಡಲಾಗಿದ್ದು ಪ್ಟೆಂಬರ್ 27ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com