ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ರೋಗಿಗಳು ಸಾವು: ತನಿಖೆಗೆ ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ ರಚನೆ

ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ರೋಗಿಗಳ ಸಾವು ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಸೂಕ್ತ ಇಲಾಖಾ ತನಿಖೆ ನಡೆಸಿ ಆಡಳಿತಾತ್ಮಕ ಹಾಗೂ ತಾಂತ್ರಿಕ ಲೋಪದೋಷಗಳ ಬಗ್ಗೆ ವರದಿ ನೀಡಲು ಬಿಎಂಸಿಆರ್ ಐ ಸಂಸ್ಥೆಯ ಡಾ.ಸ್ಮಿತಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಾಗಿದೆ.
ಬಳ್ಳಾರಿಯ ವಿಮ್ಸ್ ಆಸ್ಪತ್ರೆ
ಬಳ್ಳಾರಿಯ ವಿಮ್ಸ್ ಆಸ್ಪತ್ರೆ

ಬೆಂಗಳೂರು: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ರೋಗಿಗಳ ಸಾವು ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಸೂಕ್ತ ಇಲಾಖಾ ತನಿಖೆ ನಡೆಸಿ ಆಡಳಿತಾತ್ಮಕ ಹಾಗೂ ತಾಂತ್ರಿಕ ಲೋಪದೋಷಗಳ ಬಗ್ಗೆ ವರದಿ ನೀಡಲು ಬಿಎಂಸಿಆರ್ ಐ ಸಂಸ್ಥೆಯ ಡಾ.ಸ್ಮಿತಾ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. 

ಸಮಿತಿಯ ತನಿಖಾ ವರದಿ ಕೈಸೇರಿದ ಕೂಡಲೇ ಕರ್ತವ್ಯ ಲೋಪ ಎಸಗಿ ಅಮಾಯಕ ರೋಗಿಗಳ ದುರಂತ ಸಾವಿಗೆ ಕಾರಣರಾದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮೇಲೆ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೂಡ ಭರವಸೆ ನೀಡಿದ್ದಾರೆ. 

ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ರೋಗಿಗಳು ನಿನ್ನೆ ಅನಿರೀಕ್ಷಿತವಾಗಿ ಮೃತಪಟ್ಟಿದ್ದು, ಈ ವಿಷಯ ಇಂದು ವಿಧಾನಸಭೆ ಕಲಾಪದಲ್ಲಿ ಪ್ರಸ್ತಾಪವಾಗಿ ಆಡಳಿತ ಮತ್ತು ವಿಪಕ್ಷ ಸದಸ್ಯರ ಮಧ್ಯೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು. ಸರ್ಕಾರ ರೋಗಿಗಳ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com