ಕರ್ನಾಟಕ ಲೋಕಾಯುಕ್ತದ ಹೆಚ್ಚುವರಿ ರಿಜಿಸ್ಟ್ರಾರ್ ಹುದ್ದೆ ಭರ್ತಿಗೆ ಸಚಿವ ಸಂಪುಟ ತೀರ್ಮಾನ

ತನಿಖಾ ಸಂಸ್ಥೆಯಿಂದ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ಕರ್ನಾಟಕ ಲೋಕಾಯುಕ್ತಕ್ಕೆ ಹೆಚ್ಚುವರಿ ರಿಜಿಸ್ಟ್ರಾರ್ ನೇಮಕಕ್ಕೆ ರಾಜ್ಯ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.
ಕರ್ನಾಟಕ ಲೋಕಾಯುಕ್ತ
ಕರ್ನಾಟಕ ಲೋಕಾಯುಕ್ತ

ಬೆಂಗಳೂರು: ತನಿಖಾ ಸಂಸ್ಥೆಯಿಂದ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ಕರ್ನಾಟಕ ಲೋಕಾಯುಕ್ತಕ್ಕೆ ಹೆಚ್ಚುವರಿ ರಿಜಿಸ್ಟ್ರಾರ್ ನೇಮಕಕ್ಕೆ ರಾಜ್ಯ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದ ಹಾಗು ಎಸಿಬಿ ತನಿಖೆ ನಡೆಸುತ್ತಿದ್ದ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಿದ ವಾರಗಳ ಹೆಚ್ಚುವರಿ ರಿಜಿಸ್ಟ್ರಾರ್ ನೇಮಕಕ್ಕೆ ಒಪ್ಪಿಗೆ ದೊರೆತಿದೆ. ಇದರೊಂದಿಗೆ ಲೋಕಾಯುಕ್ತರ ವೇತನವನ್ನು ಕರ್ನಾಟಕದ ಮುಖ್ಯ ನ್ಯಾಯಮೂರ್ತಿಗಳ ವೇತನಕ್ಕೆ ಸರಿಸಮಾನವಾಗಿ ಹೆಚ್ಚಿಸುವ ನಿರ್ಧಾರವನ್ನೂ ಸಂಪುಟ ಕೈಗೊಂಡಿದೆ.

ಹೆಚ್ಚುತ್ತಿರುವ ಪ್ರಕರಣಗಳ ಹೊರೆಯನ್ನು ನಿಭಾಯಿಸಲು ಹೆಚ್ಚುವರಿ ಸಿಬ್ಬಂದಿಯನ್ನು ನೇಮಿಸುವಂತೆ ಲೋಕಾಯುಕ್ತರು ಕೋರಿದ್ದರು.

ಇದರೊಂದಿಗೆ, ಗೋದಾಮುಗಳ ನಿರ್ಮಾಣ ಪೂರ್ಣಗೊಳಿಸಲು ಮತ್ತು ಮೂಲಸೌಕರ್ಯಗಳನ್ನು ಬಲಪಡಿಸಲು 862.37 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಸಂಪುಟದ ಅನುಮೋದನೆ ದೊರೆತಿದೆ. ಕರ್ನಾಟಕ ರಾಜ್ಯ ಉಗ್ರಾಣ ನಿಗಮವು ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ.

ಬೆಂಗಳೂರಿನಲ್ಲಿ ಖಾಸಗಿ ಕಟ್ಟಡಗಳಲ್ಲಿ ನಡೆಯುತ್ತಿರುವ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ಗುತ್ತಿಗೆ ಅವಧಿಯನ್ನು ವಿಸ್ತರಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಕೇಂದ್ರದ ಜಲ ಜೀವನ್ ಮಿಷನ್ ಅಡಿಯಲ್ಲಿ ಪಿರಿಯಾಪಟ್ಟಣದಲ್ಲಿ 350 ಕೋಟಿ ರೂ., ಸಾಗರ (127 ಕೋಟಿ ರೂ.), ಬೆಳಗಾವಿ ಮತ್ತು ರಾಮದುರ್ಗ (439 ಕೋಟಿ ರೂ.), ಕೆ.ಆರ್.ನಗರ (12.74 ಕೋಟಿ ರೂ.) ಮತ್ತು ನಿಪ್ಪಾಣಿ ತಾಲೂಕು (49 ಕೋಟಿ ರೂ.) ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನಕ್ಕೆ ಅನುಮೋದನೆ ನೀಡಲಾಯಿತು.

ಹುಬ್ಬಳ್ಳಿ-ಬಳ್ಳಾರಿ ಮಾರ್ಗದ ಹೊಸಪೇಟೆ-ಕಾರಿಗನೂರು ನಿಲ್ದಾಣಗಳ ನಡುವೆ ರೈಲ್ವೆ ಮೇಲ್ಸೇತುವೆ (ಆರ್‌ಒಬಿ) ನಿರ್ಮಾಣಕ್ಕೆ 26.21 ಕೋಟಿ ರೂ., ಹುಬ್ಬಳ್ಳಿ-ಬಳ್ಳಾರಿ ಮಾರ್ಗದ ಧಾರವಾಡ-ಕ್ಯಾರಕೊಪ್ಪ ನಡುವೆ ರೈಲ್ವೆ ಕೆಳಸೇತುವೆ (ಆರ್‌ಯುಬಿ) ನಿರ್ಮಾಣಕ್ಕೆ 41.59 ಕೋಟಿ ರೂ.ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com