32,159 ಅತಿಥಿ ಶಿಕ್ಷಕರ ವೇತನ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ
ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 32,159 ಅತಿಥಿ ಶಿಕ್ಷಕರ ವೇತನಕ್ಕಾಗಿ ರಾಜ್ಯ ಸರ್ಕಾರ 17 ಸಾವಿರದ 505.23 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಿದೆ.
Published: 16th September 2022 09:52 AM | Last Updated: 16th September 2022 03:08 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 32,159 ಅತಿಥಿ ಶಿಕ್ಷಕರ ವೇತನಕ್ಕಾಗಿ ರಾಜ್ಯ ಸರ್ಕಾರ 17 ಸಾವಿರದ 505.23 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಒಟ್ಟು ಮೊತ್ತದಲ್ಲಿ 13 ಸಾವಿರದ 566.33 ಲಕ್ಷ ಸರ್ಕಾರಿ ಪ್ರಾಥಮಿಕ ಶಾಲೆಗಳ 27 ಸಾವಿರ ಅತಿಥಿ ಶಿಕ್ಷಕರ ವೇತನಕ್ಕೆ ಮತ್ತು ಸರ್ಕಾರಿ ಪ್ರೌಢಶಾಲೆಗಳ ಅತಿಥಿ ಶಿಕ್ಷಕರಿಗೆ 3938.90 ಲಕ್ಷ ರೂಪಾಯಿ ವಿತರಿಸಲಾಗುತ್ತದೆ.
ಈ ಸಂಬಂಧದ ಆದೇಶವನ್ನು ಜಿಲ್ಲಾ ಪಂಚಾಯತ್ ವಿಶೇಷ ಅಧಿಕಾರಿ ಮತ್ತು ಹಣಕಾಸು ಇಲಾಖೆಯ ಪದನಿಮಿತ್ತ ಜಂಟಿ ಕಾರ್ಯದರ್ಶಿ ಶ್ರೀಕೃಷ್ಣ ಎನ್ ಬುಗಟ್ಯಾಗೋಳ್ ಅವರು ಅಂಗೀಕರಿಸಿದ್ದಾರೆ. ಇದಕ್ಕೆ ರಾಜ್ಯಪಾಲ ಥ್ಯಾವರಚಂದ್ ಗೆಹ್ಲೋಟ್ ಅನುಮೋದನೆ ನೀಡಿದ್ದಾರೆ.
ರಾಜ್ಯಾದ್ಯಂತ 48 ಸಾವಿರ ಸರ್ಕಾರಿ ಶಾಲೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಈ ಕೊರತೆಯನ್ನು ಈ ಅತಿಥಿ ಶಿಕ್ಷಕರು ತುಂಬುತ್ತಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 2 ಸಾವಿರದ 921, ರಾಯಚೂರಿನಲ್ಲಿ 2 ಸಾವಿರದ 188, ಕಲಬುರಗಿಯಲ್ಲಿ 2 ಸಾವಿರದ 060, ಯಾದಗಿರಿಯಲ್ಲಿ ಸಾವಿರದ 895, ವಿಜಯಪುರದಲ್ಲಿ ಸಾವಿರದ 447, ಕೊಪ್ಪಳಕೋಟೆಯಲ್ಲಿ ಸಾವಿರದ 233 ಸೇರಿದಂತೆ ಉತ್ತರ ಕರ್ನಾಟಕ ಪ್ರದೇಶದಲ್ಲಿ ಪ್ರತಿ ಜಿಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ಅತಿಥಿ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ.
ಇದನ್ನೂ ಓದಿ: ಪಿಯುಸಿ ಕಾಲೇಜು ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ
ಬಳ್ಳಾರಿಯಲ್ಲಿ ಸಾವಿರದ 98 ಮತ್ತು ವಿಜಯನಗರದಲ್ಲಿ ಸಾವಿರದ 27. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 955, ಮೈಸೂರಿನಲ್ಲಿ 848, ಮಂಡ್ಯದಲ್ಲಿ 853 ಮತ್ತು ಶಿವಮೊಗ್ಗದಲ್ಲಿ 851 ಅತಿಥಿ ಶಿಕ್ಷಕರು ಸೇರಿದಂತೆ ಪ್ರತಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 800ಕ್ಕೂ ಹೆಚ್ಚು ಅತಿಥಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ.