ಮುರುಘಾ ಶರಣರು ಪೀಠ ತ್ಯಾಗ ಮಾಡಲು ನಿರ್ದೇಶಿಸಿ: ಹೈಕೋರ್ಟ್ ಸಿಜೆಗೆ ಯತ್ನಾಳ್ ಪತ್ರ

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳ ಬಗ್ಗೆ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳಿಗೆ ಶಾಸಕ ಬಸನಗೌಡ ಯತ್ನಾಳ ಎರಡು ಪುಟದ ಪತ್ರ ಬರೆದಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳ ಬಗ್ಗೆ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳಿಗೆ ಶಾಸಕ ಬಸನಗೌಡ ಯತ್ನಾಳ ಎರಡು ಪುಟದ ಪತ್ರ ಬರೆದಿದ್ದಾರೆ.  

ಮುರುಘಾಮಠದ ವಿಚಾರದ ಬಗ್ಗೆ ಉಲ್ಲೇಖಿಸಿದ್ದು ಸದ್ಯ ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಕೂಡಲೇ ಪೀಠ ತ್ಯಾಗ ಮಾಡಲು ನಿರ್ದೇಶಿಸಬೇಕೆಂದು ಮನವಿ ಮಾಡಿದ್ದಾರೆ.

ಮಠದ ದೈನಂದಿನ ವ್ಯವಹಾರ ಸುಗಮವಾಗಿ ನಡೆಯಬೇಕು. ಸದ್ಯ ಮೇಲುಸ್ತುವಾರಿ ಸಮಿತಿ ರಚನೆಯಾಗಬೇಕು. ಇದಕ್ಕಾಗಿ ನಿವೃತ್ತ ನ್ಯಾಯಮೂರ್ತಿಗಳ ಸಮಿತಿ ರಚನೆ ಮಾಡಿ. ಸುಪ್ರೀಂಕೋರ್ಟ್ ,ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಸಮಿತಿ‌ ರಚಿಸಬೇಕು. ಶ್ರೀಗಳ ನ್ಯಾಯಾಂಗ ಬಂಧನ ಅಪಮಾನ. ಇದರಿಂದ ಇಡೀ ಲಿಂಗಾಯತ ಸಮುದಾಯಕ್ಕೆ ಅಪಮಾನವಾಗಿದೆ. ಹೀಗಾಗಿ ಶ್ರೀಗಳೇ ಪೀಠ ತ್ಯಾಗ ಮಾಡಬೇಕು ಎಂದಿದ್ದಾರೆ.

ಇಲ್ಲವೇ ಮಠದ ಭಕ್ತರು ಪೀಠದಿಂದ ಪದಚ್ಯುತಗೊಳಿಸಬೇಕು. ಮಠದ ಆಡಳಿತ ಸಂಪೂರ್ಣ ಅಸ್ತವ್ಯಸ್ಥವಾಗಿದೆ.ಕಾರ್ಯದರ್ಶಿ ವಸ್ತ್ರದ ಶ್ರೀಗಳಿಂದ ಏಕಪಕ್ಷೀಯವಾಗಿ ನೇಮಕಗೊಂಡಿದ್ದಾರೆ.ಇವರ ವಿರುದ್ಧ ಭಕ್ತರು ಅಸಮಾಧಾನಗೊಂಡಿದ್ದಾರೆ.ಕೂಡಲೇ‌ ಮೇಲುಸ್ತುವಾರಿ ಸಮಿತಿ‌ ರಚನೆ ಮಾಡಿ ಎಂದು ಹೈಕೋರ್ಟ್ ಸಿಜೆಗೆ ಮನವಿ‌ಪತ್ರದಲ್ಲಿ ಶಾಸಕ ಬಸವರಾಜ ಯತ್ನಾಳ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com