ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಯಾವುದೇ ಕಾಮಗಾರಿ ಸಾಧ್ಯವಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿದ್ದು, ಉಭಯ ರಾಜ್ಯಗಳಿಗೆ ಸಂಬಂಧಿಸಿದ ಅನೇಕ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ.
ಸಿಎಂ ಬೊಮ್ಮಾಯಿ ಭೇಟಿಯಾದ ಕೇರಳ ಸಿಎಂ
ಸಿಎಂ ಬೊಮ್ಮಾಯಿ ಭೇಟಿಯಾದ ಕೇರಳ ಸಿಎಂ

ಬೆಂಗಳೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿದ್ದು, ಉಭಯ ರಾಜ್ಯಗಳಿಗೆ ಸಂಬಂಧಿಸಿದ ಅನೇಕ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ.

ಸಭೆ ಬಳಿಕ ಈ ವಿಷಯ ತಿಳಿಸಿದ ಮುಖ್ಯಮಂತ್ರಿ, ಕಾಣಿಯೂರು ರೈಲು ಮಾರ್ಗ ಸೇರಿದಂತೆ ಎರಡ್ಮೂರು ವಿಚಾರಗಳನ್ನು ಚರ್ಚೆ ಮಾಡಿದ್ದು, ರಾಜ್ಯದ ಸೂಕ್ಷ್ಮ ಪರಿಸರ ಪ್ರದೇಶದಲ್ಲಿ, ವನ್ಯಜೀವಿಧಾಮಗಳಲ್ಲಿ ಯಾವುದೇ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಕೇರಳ ಸರ್ಕಾರಕ್ಕೆ ಸ್ಪಷ್ಟಪಡಿಸಿರುವುದಾಗಿ ತಿಳಿಸಿದರು. 

ಕಾಞಂಗಾಡ್- ಕಾಣಿಯೂರು ರೈಲು ಮಾರ್ಗ (Kanjangad-Kaniyur Rail Route) ಸೇರಿದಂತೆ ವಿವಿಧ ರೈಲ್ವೇ ಮತ್ತು ಹೆದ್ದಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಸಹಮತಿ ನೀಡುವಂತೆ ಕೇರಳ ಸರ್ಕಾರ ಕೋರಿತು. ಪ್ರಸ್ತಾಪಿತ ಕಾಞಂಗಾಡ್-ಕಾಣಿಯೂರು ರೈಲು ಮಾರ್ಗವು  ಸುಳ್ಯ ಭಾಗದಲ್ಲಿ ಬರುತ್ತದೆ. ಆದರೆ, ಇದು ಜೀವ ವೈವಿಧ್ಯ ಸೂಕ್ಷ್ಮ ಪ್ರದೇಶದಲ್ಲಿ ಹಾದು ಹೋಗುವ ಕಾರಣ ಸಹಮತಿ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ ಎಂದರು.

ಇದರೊಂದಿಗೆ ಹಳೆಯ ಯೋಜನೆಯಾದ ತಲಚೇರಿ-ಮೈಸೂರು ರೈಲು ಯೋಜನೆಯನ್ನೂ ಪ್ರಸ್ತಾಪಿಸಿದರು. ಆದರೆ ಈ ಯೋಜನೆಯ ರೈಲು ಮಾರ್ಗವು ಬಂಡಿಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಮಧ್ಯಭಾಗದಲ್ಲಿ ಹಾದುಹೋಗುವುದರಿಂದ ಅಲ್ಲಿನ ವನ್ಯ ಜೀವಿ ಸಂಪತ್ತು ಹಾಗೂ ಅರಣ್ಯ ಸಂಪತ್ತಿಗೆ ಹಾನಿಯಾಗುವುದು. ಆದ್ದರಿಂದ ಇದಕ್ಕೆ ಸಮ್ಮತಿಸಲು ಸಾಧ್ಯವಿಲ್ಲ ಎಂದು ತಿಳಿಸಲಾಯಿತು ಎಂದು ಮುಖ್ಯಮಂತ್ರಿ ತಿಳಿಸಿದರು.

ಆಗ ಭೂಗತ ರೈಲು ಮಾರ್ಗ ನಿರ್ಮಿಸುವ ಕುರಿತು ಕೇರಳ ಸರ್ಕಾರವು ಪ್ರಸ್ತಾಪಿಸಿತು. ಆದರೆ ಇದರಿಂದಲೂ  ಪರಿಸರಕ್ಕೆ ಹಾನಿಯಾಗುವುದರಿಂದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಲಾಯಿತು. ನಂತರ ಕೇರಳಕ್ಕೆ ಬಂಡಿಪುರ ರಾಷ್ಟ್ರೀಯ ಉದ್ಯಾನದ ಮೂಲಕ ರಾತ್ರಿ ವೇಳೆ ಎರಡು ಬಸ್‍ಗಳು ಸಂಚರಿಸುತ್ತಿದ್ದು, 4 ಬಸ್‍ಗಳಿಗೆ ಅನುಮತಿ ನೀಡುವಂತೆ ಕೋರಿದರು. ಇದಕ್ಕೂ ರಾಜ್ಯ ಸರ್ಕಾರ ಒಪ್ಪಿಗೆ ನೀಡಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com