ಕಾಫಿ ಅಭಿವೃದ್ಧಿ ಮಂಡಳಿ ರದ್ದುಪಡಿಸಿ: ಶಾಸಕ ಎಂ.ಪಿ.ಕುಮಾರಸ್ವಾಮಿ ಆಗ್ರಹ

ಕಾಫಿನಾಡಿನ ರೈತರಿಗೆ ಉಪಯೋಗವಿಲ್ಲದ ಕಾಫಿ ಅಭಿವೃದ್ಧಿ ಮಂಡಳಿಯನ್ನು ರದ್ದುಗೊಳಿಸಬೇಕು ಎಂದು ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಮಂಗಳವಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಎಂಪಿ ಕುಮಾರಸ್ವಾಮಿ
ಎಂಪಿ ಕುಮಾರಸ್ವಾಮಿ

ಬೆಂಗಳೂರು: ಕಾಫಿನಾಡಿನ ರೈತರಿಗೆ ಉಪಯೋಗವಿಲ್ಲದ ಕಾಫಿ ಅಭಿವೃದ್ಧಿ ಮಂಡಳಿಯನ್ನು ರದ್ದುಗೊಳಿಸಬೇಕು ಎಂದು ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಮಂಗಳವಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇಂದು ವಿಧಾನ ಸಭೆಯಲ್ಲಿ ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿ ಮಾತನಾಡಿದ ಅವರು, ಕಾಫಿ ಅಭಿವೃದ್ಧಿ ಮಂಡಳಿಯಿಂದ 2018ರಿಂದ ಕಾಫಿ ಬೆಳೆ ರೈತರಿಗೆ ಇದುವರೆಗೂ ಯಾವುದೇ ಅತಿವೃಷ್ಟಿ ಪರಿಹಾರ ಬಂದಿಲ್ಲ. ಈ ಭಾರಿ ಮಲೆನಾಡು ಭಾಗದಲ್ಲಿ ಶೇ. 33ರಷ್ಟು ಮಳೆಯಾಗಿದೆ ಎಂದು ಕೃಷಿ, ಕಂದಾಯ ಇಲಾಖೆ, ತೋಟಗಾರಿಕಾ ಇಲಾಖೆ ವರದಿ ನೀಡಿದೆ. ಆದರೆ ಕಾಫಿ ಅಭಿವೃದ್ಧಿ ಮಂಡಳಿ ಮಾತ್ರ ಶೇ. 22ರಷ್ಟು ಮಳೆಯಾಗಿದೆ ಎಂದು ವರದಿ ನೀಡಿದೆ. ಈ ಬಾರಿ ಮಲೆನಾಡು ಭಾಗದಲ್ಲಿ ಅತ್ಯಧಿಕ ಮಳೆಯಾಗಿದೆ ಈ ರೀತಿ ಸುಳ್ಳು ವರದಿ ನೀಡಿ ಜನರ ಹಾದಿ ತಪ್ಪಿಸುವುದು ಸರಿಯಲ್ಲ ಎಂದು ಹೇಳಿದರು.

ಕಾಫಿ ಅಭಿವೃದ್ಧಿ ಮಂಡಳಿಯಿಂದ ಯಾವುದೇ ಉಪಯೋಗವಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮನ್ನು ನಿರ್ಲಕ್ಷಿಸಿವೆ ಎಂಬ ಆತಂಕದಲ್ಲಿ  ಬೆಳೆಗಾರರು ಇದ್ದಾರೆ. ಕಾಫಿಯಿಂದ ಈ ಹಿಂದೆ ವಾರ್ಷಿಕವಾಗಿ ವಿದೇಶಿ ವಿನಿಮಯದಿಂದ ಐದು ಸಾವಿರ ಕೋಟಿ ರೂಪಾಯಿ ಆದಾಯ ಪಡೆಯಲಾಗುತ್ತಿತ್ತು. ಪ್ರಸ್ತುತ 9 ಸಾವಿರ ಕೋಟಿ ರೂಪಾಯಿ ಆದಾಯ ಪಡೆಯಲಾಗುತ್ತಿದೆ ಎಂದರು.

ಕಾಫಿಯನ್ನು ದೊಡ್ಡ ಉದ್ಯಮ, ವಾಣಿಜ್ಯ ಬೆಳೆಯನ್ನಾಗಿ ಪರಿಗಣಿಸಿರುವುದು ಸರಿಯಲ್ಲ. ಇದನ್ನು ಕೃಷಿ ಬೆಳೆಯನ್ನಾಗಿ ಪರಿಗಣಿಸಿದರೆ ರೈತರಿಗೆ ಸರ್ಕಾರದ ಸವಲತ್ತುಗಳು ದೊರೆಯಲಿದೆ. ಕೇಂದ್ರ ಫಸಲ್ ಬೀಮಾ ಯೋಜನೆಯ ವ್ಯಾಪ್ತಿಯಲ್ಲಿ ತರಬೇಕು. ಮಲೆನಾಡು ಭಾಗದಲ್ಲಿ ಪ್ರತಿವರ್ಷ ಹೆಚ್ಚು ಪ್ರಮಾಣದ ಮಳೆಯಾಗಿ ರೈತರು ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ. ಚಿಕ್ಕಮಗಳೂರು, ಮಡಿಕೇರಿ, ಹಾಸನ ಜಿಲ್ಲೆಯನ್ನು ಅತಿವೃಷ್ಢಿ ಪ್ರದೇಶ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com