ಸಿಎಂ ಮನೆ ಮುಂದೆ ಪ್ರತಿಭಟನೆ: 43 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ವ್ಯವಸ್ಥೆ ಎಂದ ಬೊಮ್ಮಾಯಿ

ರಾಜ್ಯದಲ್ಲಿ ಇರುವ ಒಟ್ಟು 43 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುವುದು. ಐಪಿಡಿ ಸಾಲಪ್ಪ ವರದಿ ಅನುಷ್ಠಾನಕ್ಕೆ  ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪೌರ ಕಾರ್ಮಿಕರು
ಪೌರ ಕಾರ್ಮಿಕರು

ಬೆಂಗಳೂರು: ರಾಜ್ಯದಲ್ಲಿ ಇರುವ ಒಟ್ಟು 43 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುವುದು. ಐಪಿಡಿ ಸಾಲಪ್ಪ ವರದಿ ಅನುಷ್ಠಾನಕ್ಕೆ  ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇಂದು ವಿಶ್ವ ಶಾಂತಿ ದಿನ. ಪ್ರೀತಿ, ಶಾಂತಿ ಮತ್ತು ಸೌಹಾರ್ದಯುತವಾಗಿ ಬದುಕುವ ಮೂಲಕ ಉತ್ತಮ ವಾತಾವರಣವನ್ನು ನಿರ್ಮಿಸೋಣ. ಈ ಮೂಲಕ ಸದೃಢ ಹಾಗೂ ಸಮರ್ಥ ದೇಶವನ್ನು ನಿರ್ಮಿಸುವ ಸಂಕಲ್ಪ ಮಾಡೋಣ ಎಂದು ಆಶಿಸಿದ್ದಾರೆ. 

ಇದಕ್ಕೂ ಮುನ್ನ ಆರ್ ಟಿ ನಗರದಲ್ಲಿರುವ ಸಿಎಂ ಬೊಮ್ಮಾಯಿ ನಿವಾಸ ಮುಂದೆ ಪೌರ ಕಾರ್ಮಿಕರು ಖಾಯಮಾತಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಬೆಂಗಳೂರಿನಲ್ಲಿ 26 ಸಾವಿರ ಪೌರ ಕಾರ್ಮಿಕರು ಕೆಲಸ ಮಾಡುತ್ತಿದ್ದು 8 ಸಾವಿರ ಕಾರ್ಮಿಕರನ್ನು ಖಾಯಂ ಮಾಡುವ ಅವಕಾಶ ಸರ್ಕಾರಕ್ಕಿದೆ. ಆದರೆ ಸರ್ಕಾರ 1 ಸಾವಿರ ಕಾರ್ಮಿಕರನ್ನು ಮಾತ್ರ ಖಾಯಂ ಮಾಡಲಾಗುತ್ತಿದೆ. ಉಳಿದ 7 ಸಾವಿರ ಪೌರ ಕಾರ್ಮಿಕರನ್ನು ಖಾಯಂಗೊಳಿಸಬೇಕು ಎಂದು ಸಿಎಂ ಬೊಮ್ಮಾಯಿ ಎದುರೇ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.

ಪೌರ ಕಾರ್ಮಿಕರಿಗೆ ಅನ್ಯಾಯವಾಗಿದ್ದು ಮುಖ್ಯಮಂತ್ರಿಗಳು ಗೆಜೆಟ್ ನೊಟಿಫಿಕೇಶನ್ ಆಗುವುದರೊಳಗೆ ತಿದ್ದುಪಡಿ ಮಾಡಿ ಹೊಸ ಆದೇಶ ಹೊರಡಿಸಬೇಕೆಂದು ಆಗ್ರಹಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com