86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಸ್ತಬ್ಧಚಿತ್ರ ಪ್ರದರ್ಶನಕ್ಕೆ ಆಹ್ವಾನ

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಆಹ್ವಾನ ನೀಡಿದೆ.
ಕನ್ನಡ ಸಾಹಿತ್ಯ ಪರಿಷತ್ತು
ಕನ್ನಡ ಸಾಹಿತ್ಯ ಪರಿಷತ್ತು

ಬೆಂಗಳೂರು: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಆಹ್ವಾನ ನೀಡಿದೆ.

ಸಮಗ್ರ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಹಾವೇರಿಯಲ್ಲಿ 2022ರ ನವೆಂಬರ್ 11, 12 ಹಾಗೂ 13 ರಂದು ಡಾ. ದೊಡ್ಡರಂಗೇಗೌಡ ಅವರ ಸರ್ವಾಧ್ಯಕ್ಷತೆಯಲ್ಲಿ ಆಯೋಜಿಸಲಾಗುತ್ತಿರುವ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆಯಲ್ಲಿ ಸ್ತಬ್ಧ ಚಿತ್ರಗಳ (ಟ್ಯಾಬ್ಲೊ) ಪ್ರದರ್ಶನ ಮಾಡಲು ಸಂಘ ಸಂಸ್ಥೆಗಳು ಸಕ್ರಿಯವಾಗಿ ತೊಡಗಿಸಿಕೊಳ್ಳಲು ಅವಕಾಶವಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ  ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಅಕ್ಷರ ಜಾತ್ರೆಯನ್ನು ಕೇವಲ ಕನ್ನಡ ಸಾಹಿತ್ಯ ಪರಿಷತ್ತು ಅಥವಾ ಸರಕಾರ ಮಾತ್ರ ಆಚರಿಸುತ್ತಿಲ್ಲ, ಬದಲಾಗಿ ಇದು ಪ್ರತಿಯೊಬ್ಬ ಕನ್ನಡಿಗರು, ಕನ್ನಡ ನಾಡಿನ ಸಂಘ ಸಂಸ್ಥೆಗಳು ಸೇರಿದಂತೆ ಎಲ್ಲರೂ ಆಚರಿಸುವ  ಕನ್ನಡದ ಹಬ್ಬವಾಗಿದೆ. ಹೀಗಾಗಿ ಕನ್ನಡದ ಮನಸ್ಸನ್ನು ಹೊಂದಿರುವ ನಾಡಿನ ಸಂಘ ಸಂಸ್ಥೆಗಳು ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆಯಲ್ಲಿ ನಾಡು, ನುಡಿ, ಸಂಸ್ಕೃತಿ, ಸಾಧನೆಗಳನ್ನು ಪ್ರತಿಬಿಂಬಿಸುವ ಸ್ತಬ್ಧ ಚಿತ್ರವನ್ನು ಕಲಾತ್ಮಕವಾಗಿ ರಚಿಸಿ ಸಮ್ಮೇಳನದ ಮೆರವಣಿಗೆಯಲ್ಲಿ ಪ್ರದರ್ಶನ ಮಾಡಬಹುದಾಗಿದೆ.

ನಾಡು, ನುಡಿ, ಪರಂಪರೆ, ಸಾಹಿತ್ಯ, ಕಲೆ, ಸಂಸ್ಕೃತಿ, ಸಾಧನೆಗಳು, ನೆಲ ಮೂಲಗಳ ಇತಿಹಾಸವನ್ನು ಬಿಂಬಿಸಬಲ್ಲ ಸ್ತಬ್ಧಚಿತ್ರಗಳ ಪ್ರದರ್ಶನಕ್ಕೆ ಅವಕಾಶವಿದ್ದು ಭಾಗವಹಿಸುವವರು ತಮ್ಮ ಸಂಸ್ಥೆಯ ಪೂರ್ಣ ಮಾಹಿತಿ ಹಾಗೂ ಯಾವ ಸ್ತಬ್ಧ ಚಿತ್ರಗಳನ್ನು ಪ್ರದರ್ಶಿಸುವಿರಿ ಎನ್ನುವ ವಿನ್ಯಾಸದ ಮಾದರಿಯನ್ನು ಒಳಗೊಂಡ ಅರ್ಜಿಯನ್ನು ದಿನಾಂಕ ಅಕ್ಟೋಬರ್ ೧೭ರ ಕಚೇರಿ ಸಮಯದೊಳಗೆ ʻಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು ೫೬೦೦೧೮ʼ ಇವರಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಕೋರಲಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com