ಸೋಮವಾರ ರಾಷ್ಟ್ರಪತಿಗಳಿಂದ ಮೈಸೂರು ದಸರಾ ಉದ್ಘಾಟನೆ, ದ್ರೌಪದಿ ಮುರ್ಮು ಕಾರ್ಯಕ್ರಮ ಪಟ್ಟಿ ಹೀಗಿದೆ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಲಿದ್ದು, ದೇಶದ ಮೊದಲ ಪ್ರಜೆಗೆ ಅದ್ಧೂರಿ ಸ್ವಾಗತ ನೀಡಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ.
Published: 22nd September 2022 06:45 PM | Last Updated: 22nd September 2022 06:55 PM | A+A A-

ದ್ರೌಪದಿ ಮುರ್ಮು
ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಲಿದ್ದು, ದೇಶದ ಮೊದಲ ಪ್ರಜೆಗೆ ಅದ್ಧೂರಿ ಸ್ವಾಗತ ನೀಡಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ.
ಮೈಸೂರು ದಸರಾ ಉದ್ಘಾಟನೆಗೆ ಆಗಮಿಸುತ್ತಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕಾರ್ಯಕ್ರಮ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ.
ಸೆಪ್ಟೆಂಬರ್ 26ರ ಸೋಮವಾರ ಬೆಳಗ್ಗೆ 6.15ಕ್ಕೆ ರಾಷ್ಟ್ರಪತಿ ಮುರ್ಮು ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಸೆಪ್ಟೆಂಬರ್ 26ರ ಬೆಳಗ್ಗೆ 9 ಗಂಟೆಗೆ ಮಂಡಕಳ್ಳಿ ಏರ್ಪೋರ್ಟ್ಗೆ ಆಗಮಿಸಲಿದ್ದಾರೆ. ನಂತರ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಇಂದು 22-09-2022 ಗುರುವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಾನ್ಯ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಯಿತು.@PMOIndia @narendramodi@AmitShah @AmitShahOffice@CMofKarnataka @BSBommai@BSYBJP @mepratap pic.twitter.com/NBZ6gGYLXJ
— S T Somashekar Gowda (@STSomashekarMLA) September 22, 2022
ದ್ರೌಪದಿ ಮುರ್ಮು ಅವರು ಸೋಮವಾರ ಬೆಳಗ್ಗೆ 10 ಗಂಟೆಗೆ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ.
ಬೆಳಗ್ಗೆ 10:45ಕ್ಕೆ ಚಾಮುಂಡಿ ಬೆಟ್ಟದಿಂದ ಮುರ್ಮು ಹೊರಡುವರು. ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತ್ರ ಮುರ್ಮು ಭಾಗಿಯಾಗಿ, ಬೆಳಗ್ಗೆ 11:15ಕ್ಕೆ ಮೈಸೂರಿನಿಂದ ಹುಬ್ಬಳ್ಳಿಗೆ ಪ್ರಯಾಣ ಮಾಡಲಿದ್ದಾರೆ.