ಶೀಘ್ರದಲ್ಲೇ ಬಳ್ಳಾರಿ ರಸ್ತೆ ವಿಸ್ತರಣೆ: ಹೈಕೋರ್ಟ್ ಗೆ ರಾಜ್ಯ ಸರ್ಕಾರ ಅಫಿಡವಿಟ್ಟು ಸಲ್ಲಿಕೆ
ಬಳ್ಳಾರಿ ರಸ್ತೆಯನ್ನು ಕಾವೇರಿ ಜಂಕ್ಷನ್‌ನಿಂದ ಮೇಖ್ರಿ ವೃತ್ತದವರೆಗೆ ಸರ್ಕಾರಕ್ಕೆ ಸೇರಿರುವ ಜಾಗದಲ್ಲಿ ಅಗಲಗೊಳಿಸುವ ಕಾಮಗಾರಿಯನ್ನು ತಕ್ಷಣವೇ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ ಎಂದು ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ.
Published: 22nd September 2022 01:59 PM | Last Updated: 22nd September 2022 01:59 PM | A+A A-

ಸಾಂಕೇತಿಕ ಚಿತ್ರ
ಬೆಂಗಳೂರು: ಬಳ್ಳಾರಿ ರಸ್ತೆಯನ್ನು ಕಾವೇರಿ ಜಂಕ್ಷನ್‌ನಿಂದ ಮೇಖ್ರಿ ವೃತ್ತದವರೆಗೆ ಸರ್ಕಾರಕ್ಕೆ ಸೇರಿರುವ ಜಾಗದಲ್ಲಿ ಅಗಲಗೊಳಿಸುವ ಕಾಮಗಾರಿಯನ್ನು ತಕ್ಷಣವೇ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ ಎಂದು ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ.
ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು (TDR) ಸಮಸ್ಯೆಯನ್ನು ಪರಿಹರಿಸುವವರೆಗೆ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಪರ್ಯಾಯ ಕ್ರಮವನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ಸರ್ಕಾರ ಹೇಳಿದೆ.
ನ್ಯಾಯವಾದಿ ಜಿ ಆರ್ ಮೋಹನ್ ಅವರ ಮೂಲಕ ಸಾಮಾಜಿಕ-ಸಾಂಸ್ಕೃತಿಕ ಸಂಘಟನೆಯು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ವಿಚಾರಣೆಯ ಸಂದರ್ಭದಲ್ಲಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ವಿಭಾಗೀಯ ಪೀಠದ ಮುಂದೆ ಈ ಕುರಿತು ಅಫಿಡವಿಟ್ ಸಲ್ಲಿಸಲಾಯಿತು.
ಕಿರಿದಾದ ರಸ್ತೆಯಲ್ಲಿ ಸಂಚಾರ ದಟ್ಟಣೆ ತಗ್ಗಿಸಲು ಮೇಲ್ಸೇತುವೆ ಅಥವಾ ಅಂಡರ್‌ಪಾಸ್ ನಿರ್ಮಿಸಲು ಮತ್ತು ಮಾರ್ಗದಲ್ಲಿ ಸಂಚಾರ ದಟ್ಟಣೆಗೆ ಕಾರಣವಾಗಿರುವ ರಸ್ತೆಯ ಪಕ್ಕದಲ್ಲಿರುವ ಕಲ್ಯಾಣ ಮಂಟಪಗಳಿಗೆ ಪರ್ಯಾಯ ಮಾರ್ಗವನ್ನು ಅನ್ವೇಷಿಸುವುದಾಗಿ ಸರ್ಕಾರ ಅಫಿಡವಿಟ್‌ನಲ್ಲಿ ತಿಳಿಸಿದೆ.
ಕಳೆದ ಸೆಪ್ಟೆಂಬರ್ 16ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರು ಅಫಿಡವಿಟ್ ಸಲ್ಲಿಸಿದ್ದಾರೆ. ಅಫಿಡವಿಟ್ಟು ಸಲ್ಲಿಕೆಯನ್ನು ದಾಖಲಿಸಿಕೊಂಡ ನ್ಯಾಯಾಲಯ, ಅಫಿಡವಿಟ್‌ನಲ್ಲಿ ನಿರ್ದಿಷ್ಟಪಡಿಸದ ಕಾರಣ ಉದ್ದೇಶಿತ ರಸ್ತೆಯ ವಿಸ್ತರಣೆಯನ್ನು ಹೇಗೆ ಮತ್ತು ಯಾವ ರೀತಿಯಲ್ಲಿ ವಿಸ್ತರಿಸಲಾಗುವುದು ಎಂದು ತಿಳಿಸಲು ರಾಜ್ಯ ಸರ್ಕಾರಕ್ಕೆ ಮೂರು ವಾರಗಳ ಕಾಲಾವಕಾಶ ನೀಡಿತು.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಹೆಚ್ಚು ವೈಜ್ಞಾನಿಕ ಮತ್ತು ತಾಂತ್ರಿಕ ಆಧಾರದ ಮೇಲೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ತಿಳಿಸಿರುವ ಸರ್ಕಾರ, ಈ ಬಗ್ಗೆ ನಿರ್ಧಾರ ಕೈಗೊಂಡು ಇತರ ಆಯ್ಕೆಗಳನ್ನು ಪರಿಗಣಿಸಲು ನ್ಯಾಯಾಲಯದ ಮುಂದೆ ಇಡಲಾಗುವುದು ಎಂದು ಹೇಳಿದೆ.
ಮೀಸಲಾತಿ ವಿರುದ್ಧದ ಅರ್ಜಿಗಳ ವಿಚಾರಣೆಯನ್ನು ಸೆಪ್ಟೆಂಬರ್ 27ಕ್ಕೆ ಮುಂದೂಡಿಕೆ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 243 ವಾರ್ಡ್‌ಗಳಿಗೆ ಮೀಸಲಾತಿ ಕುರಿತು ನಗರಾಭಿವೃದ್ಧಿ ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಸೆಪ್ಟೆಂಬರ್ 27ಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದರು.
ಅಂತಿಮ ಮತದಾರರ ಪಟ್ಟಿ
ರಾಜ್ಯ ಚುನಾವಣಾ ಆಯೋಗವನ್ನು ಪ್ರತಿನಿಧಿಸಿದ ಹಿರಿಯ ವಕೀಲ ಕೆ ಎನ್ ಫಣೀಂದ್ರ ಅವರು, ಸೆಪ್ಟೆಂಬರ್ 29 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು.