ಕೋವಿಡ್-19: ಇಂದು ಬೆಂಗಳೂರಿನಲ್ಲಿ 158 ಸೇರಿ ರಾಜ್ಯದಲ್ಲಿ 319 ಮಂದಿಗೆ ಪಾಸಿಟಿವ್; ಇಬ್ಬರು ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ319 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,63,152ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ319 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,63,152ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಇಬ್ಬರು ಮೃತಪಟ್ಟಿದ್ದು. ಸಾವಿನ ಸಂಖ್ಯೆ 40238 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 158 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1871055ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 450 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4019811ಕ್ಕೆ ಏರಿಕೆಯಾಗಿದೆ. ಇನ್ನು 3061 ಸಕ್ರಿಯ ಪ್ರಕರಣಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com