ಬಿ.ಎಸ್ ಯಡಿಯೂರಪ್ಪಗೆ ರಿಲೀಫ್: ಮಾಜಿ ಸಿಎಂ ವಿರುದ್ಧ ತನಿಖೆ ನಡೆಸುವಂತೆ ಹೈಕೋರ್ಟ್ ನೀಡಿದ್ದ ಆದೇಶಕ್ಕೆ 'ಸುಪ್ರೀಂ' ತಡೆ!

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್‌ನ ತನಿಖೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಯಡಿಯೂರಪ್ಪ
ಯಡಿಯೂರಪ್ಪ

ನವದೆಹಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್‌ನ ತನಿಖೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.

ತನಿಖೆಗೆ ಅನುಮತಿ ನೀಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಯಡಿಯೂರಪ್ಪ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಹಾಗೂ ಹಿಮಾ ಕೊಹ್ಲಿ ಅವರನ್ನು ಒಳಗೊಂಡ ನ್ಯಾಯಪೀಠವು, ದೂರುದಾರರಾದ ಟಿ.ಜೆ. ಅಬ್ರಾಹಂ ಅವರಿಗೆ ನೋಟಿಸ್‌ ಜಾರಿ ಮಾಡಿದೆ.

ಯಡಿಯೂರಪ್ಪ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲರಾದ ಮುಕುಲ್‌ ರೊಹಟಗಿ ಹಾಗೂ ಸಿದ್ಧಾರ್ಥ ದವೆ ಅವರು, ಜನಪ್ರತಿನಿಧಿಗಳ ಮುನ್ನ ಎಫ್ಐಆರ್ ದಾಖಲಿಸುವ ಮುನ್ನ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯಬೇಕು ಎಂಬ ನಿಯಮವನ್ನು ಹೈಕೋರ್ಟ್‌ ನಿರ್ಲಕ್ಷ್ಯಿಸಿದೆ ಎಂದರು. ಆಗ ನ್ಯಾಯಪೀಠ, ಈ ಕುರಿತು ಪರಿಶೀಲಿಸುವುದಾಗಿ ತಿಳಿಸಿತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com