2023ರ ಮಾರ್ಚ್ ವೇಳೆಗೆ ಬೆಂಗಳೂರು-ಹುಬ್ಬಳ್ಳಿ ನಡುವೆ ಓಡಲಿದೆ 'ವಂದೇ ಭಾರತ್ ರೈಲು’: ಕೇಂದ್ರ ಸಚಿವೆ

ಕರ್ನಾಟಕವು ತನ್ನ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ಹೈಸ್ಪೀಡ್ ರೈಲನ್ನು ಮಾರ್ಚ್ 2023 ರೊಳಗೆ ಬೆಂಗಳೂರಿನಿಂದ ಹುಬ್ಬಳ್ಳಿಗೆ ಓಡಿಸಲಿದೆ ಎಂದು ಕೇಂದ್ರ ರೈಲ್ವೆ ಮತ್ತು ಜವಳಿ ಖಾತೆ ರಾಜ್ಯ ಸಚಿವ ದರ್ಶನ ಜರ್ದೋಶ್ ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕರ್ನಾಟಕವು ತನ್ನ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ಹೈಸ್ಪೀಡ್ ರೈಲನ್ನು ಮಾರ್ಚ್ 2023 ರೊಳಗೆ ಬೆಂಗಳೂರಿನಿಂದ ಹುಬ್ಬಳ್ಳಿಗೆ ಓಡಿಸಲಿದೆ ಎಂದು ಕೇಂದ್ರ ರೈಲ್ವೆ ಮತ್ತು ಜವಳಿ ಖಾತೆ ರಾಜ್ಯ ಸಚಿವ ದರ್ಶನ ಜರ್ದೋಶ್ ಹೇಳಿದ್ದಾರೆ.

ಶುಕ್ರವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ವಿಭಾಗದಲ್ಲಿ ಹಳಿ ದ್ವಿಗುಣಗೊಳಿಸುವ ಕಾರ್ಯ ನಡೆಯುತ್ತಿದೆ ಮತ್ತು ಮಾರ್ಚ್ 2023 ರ ವೇಳೆಗೆ ಹೈಸ್ಪೀಡ್ ರೈಲು ಕಾರ್ಯಾಚರಣೆಗೆ ಸಿದ್ಧವಾಗಲಿದೆ ಎಂದು ರೈಲ್ವೆ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ನಾವು ಇದನ್ನು ಡಿಸೆಂಬರ್ 2022 ರೊಳಗೆ ಪೂರ್ಣಗೊಳಿಸುತ್ತೇವೆ ಮತ್ತು ಅಲ್ಲಿಂದ ಎರಡು ಅಥವಾ ಮೂರು ತಿಂಗಳಲ್ಲಿ ವಿದ್ಯುದ್ದೀಕರಣವನ್ನು ಮಾಡಲಾಗುತ್ತದೆ. ಹೀಗಾಗಿ ಮುಂದಿನ ವರ್ಷ ಮಾರ್ಚ್‌ಗೆ ವಂದೇ ಭಾರತ ರೈಲು ಓಡಿಸಲು ಉತ್ತಮ ಅವಕಾಶವಿದೆ ಎಂದರು.

ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ 45 ಕಿ.ಮೀ ಉದ್ದದ ಹಳಿ ದ್ವಿಗುಣಗೊಳಿಸುವ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಗಳೂರು ಉಪನಗರ ರೈಲು ಯೋಜನೆಯನ್ನು ಅದರ ಗಡುವು 27 ತಿಂಗಳೊಳಗೆ ಪೂರ್ಣಗೊಳಿಸುವಂತೆ ಬೆಂಗಳೂರು ಕೇಂದ್ರ ಸಂಸದ ಪಿಸಿ ಮೋಹನ್ ಒತ್ತಾಯಿಸಿದರು.

ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಮೈಸೂರಿಗೆ ಎರಡನೇ ಕೋಚಿಂಗ್ ಟರ್ಮಿನಲ್ ಮತ್ತು ಮೈಸೂರು ಮತ್ತು ಕೊಡಗು ನಡುವೆ ರೈಲು ಮಾರ್ಗದ ಅಗತ್ಯವನ್ನು ಒತ್ತಿ ಹೇಳಿದರು. ಹಾವೇರಿ-ಗದಗ ಸಂಸದ ಶಿವಕುಮಾರ್ ಸಿ ಉದಾಸಿ ಅವರು ಗದಗ ಮತ್ತು ಯಳವಿಗಿ ನಡುವೆ ಹೊಸ ಮಾರ್ಗವನ್ನು ಕೋರಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com