ವಿಧಾನಸೌಧ ಚಲೋಗೆ ತಡೆ; ನೂರಾರು ರೈತರು ಪೊಲೀಸ್ ವಶಕ್ಕೆ 

ನ್ಯಾಯಯುತ ಕಬ್ಬಿನ ದರ ನಿಗದಿ ಮಾಡುವಂತೆ ಹಾಗೂ ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಂಗಳೂರಿನಲ್ಲಿ ಇಂದು ವಿಧಾನಸೌಧ ಚಲೋ ನಡೆಸಲು ಮುಂದಾದ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ನೂರಾರು ರೈತರನ್ನು ಪೊಲೀಸರು ತಡೆದರು.
ವಿಧಾನಸೌಧ
ವಿಧಾನಸೌಧ

ಬೆಂಗಳೂರು: ನ್ಯಾಯಯುತ ಕಬ್ಬಿನ ದರ ನಿಗದಿ ಮಾಡುವಂತೆ ಹಾಗೂ ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಂಗಳೂರಿನಲ್ಲಿ ಇಂದು ವಿಧಾನಸೌಧ ಚಲೋ ನಡೆಸಲು ಮುಂದಾದ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ನೂರಾರು ಸದ್ಯಸರನ್ನು ಪೊಲೀಸರು ತಡೆದು ವಶಕ್ಕೆ ಪಡೆದರು.

ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೇತರ) ರಾಷ್ಟ್ರೀಯ ರೈತ ಮುಖಂಡರ ಬೆಂಬಲದೊಂದಿಗೆ ವಿಧಾನಸೌಧ ಚಲೋ ನಡೆಸಲು ಯತ್ನಿಸಿದ ರೈತರನ್ನು ಮಾರ್ಗ ಮಧ್ಯೆ ಪೊಲೀಸರು ತಡೆದರು.

ಇದರಿಂದ ಆಕ್ರೋಶಗೊಂಡ ರೈತರು ಘೋಷಣೆ ಕೂಗಿ ಪ್ರತಿಭಟಿಸಿದರು  ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾಗೂ ವಿದ್ಯುತ್ ಖಾಸಗೀಕರಣ ವಿರೋಧಿಸಿ ಹಕ್ಕೋತ್ತಾಯ ಪತ್ರ ಸಲ್ಲಿಸಿದ್ದರೂ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿರುವುದಿಲ್ಲ ಎಂದು ಪ್ರತಿಭಟಾನಾಕಾರರು ಆರೋಪಿಸಿದ್ದಾರೆ. 

ಉತ್ತರ ಪ್ರದೇಶ ಸರ್ಕಾರದ ಮಾನದಂಡದಂತೆ ಕನಿಷ್ಠ   ಕಬ್ಬಿನ ದರ ನಿಗದಿಯಾಗಬೇಕು, ಕೇಂದ್ರ ಸರ್ಕಾರ ಸಕ್ಕರೆ ಉದ್ದಿಮೆದಾರರ ತಾಳಕ್ಕೆ ತಕ್ಕಂತೆ ಕುಣಿದು ರೈತರಿಗೆ ಅನ್ಯಾಯ ಮಾಡುವುದನ್ನು ನಿಲ್ಲಿಸಬೇಕೆಂದು ಪ್ರತಿಭಟನಾ ನಿರತ ರೈತರು ಒತ್ತಾಯಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com