ಬಾಗ್ಮನೆ ಒತ್ತುವರಿ: ಲೋಕಾಯುಕ್ತ ಮಧ್ಯಪ್ರವೇಶ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ಸಮಾಜ ಪರಿವರ್ತನಾ ಸಮುದಾಯ

ರಾಜಕಾಲುವೆ  ಒತ್ತುವರಿ ತೆರವುಗೊಳಿಸುವ ವಿಚಾರದಲ್ಲಿ ಬಾಗ್ಮನೆ ಡೆವಲಪ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ವಿಚಾರಣೆ ಕೈಗೊಂಡಿರುವ ಕರ್ನಾಟಕ ಲೋಕಾಯುಕ್ತ ಕಾನೂನು ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿ ಸಮಾಜ ಪರಿವರ್ತನಾ ಸಮುದಾಯವು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್​) ಸಲ್ಲಿಸಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ನಗರದಲ್ಲಿನ ರಾಜಕಾಲುವೆ  ಒತ್ತುವರಿ ತೆರವುಗೊಳಿಸುವ ವಿಚಾರದಲ್ಲಿ ಬಾಗ್ಮನೆ ಡೆವಲಪ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ವಿಚಾರಣೆ ಕೈಗೊಂಡಿರುವ ಕರ್ನಾಟಕ ಲೋಕಾಯುಕ್ತ ಕಾನೂನು ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿ ಸಮಾಜ ಪರಿವರ್ತನಾ ಸಮುದಾಯವು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್​) ಸಲ್ಲಿಸಿದೆ.

ಈ ಮೇರೆಗೆ ಸೋಮವಾರ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರನ್ನೊಳಗೊಂಡ ವಿಭಾಗೀಯ ಪೀಠವು, ಈ ಪ್ರಕರಣವನ್ನು ಸೆಪ್ಟೆಂಬರ್ 28 ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ.

ಬಾಗ್ಮನೆ ಡೆವಲಪಮೆಂಟ್​ ಪ್ರೈವೇಟ್​ ಲಿಮಿಟೆಡ್‌ ಒತ್ತುವರಿ ಮಾಡಿಕೊಂಡಿರುವ ಕಾಂಪೌಂಡ್ ಗೋಡೆ ಕೆಡವಲು ಸಂಬಂಧಿಸಿದಂತೆ ರಿಯಲ್ ಎಸ್ಟೇಟ್ ಸಂಸ್ಥೆ ಎತ್ತಿರುವ ಸಮಸ್ಯೆಗಳು ನ್ಯಾಯಾಲಯದ ವ್ಯಾಪ್ತಿಗೆ ಬರುತ್ತವೆಯೇ ಹೊರತು ಲೋಕಾಯುಕ್ತದ ವ್ಯಾಪ್ತಿಗೆ ಬರುವುದಿಲ್ಲ ಎಂದು ಸಮಾಜ ಪರಿವರ್ತನಾ ಸಮುದಾಯದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಆರೋಪಿಸಲಾಗಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲರು, ಲೋಕಾಯುಕ್ತರು ನಡೆಸುತ್ತಿರುವ ಸಮಾನಾಂತರ ಪ್ರಕ್ರಿಯೆಗಳು ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಸೆಕ್ಷನ್ 8ರ ಉಲ್ಲಂಘನೆಯಾಗಿದೆ ಎಂದು ವಾದಿಸಿದರು.

ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಉಂಟಾದ ಪ್ರವಾಹದಿಂದಾಗಿ ಎಚ್ಚೆತ್ತುಕೊಂಡ ಬಿಬಿಎಂಪಿ, ರಾಜಕಾಲುವೆ ಒತ್ತುವರಿ ತೆರವಿಗೆ ಕ್ರಮಗಳನ್ನು ಕೈಗೊಂಡಿತ್ತು. ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವ ಬಾಗ್ಮನೆ ಟೆಕ್ ಪಾರ್ಕ್ ವಿರುದ್ಧವೂ ಕ್ರಮ ಕೈಗೊಳ್ಳಲು ಮುಂದಾಗಿತ್ತು. ಈ ಸಂಬಂಧ ಬಾಗ್ಮನೆ ಸಂಸ್ಥೆಯು ಲೋಕಾಯುಕ್ತರಿಗೆ ದೂರು ನೀಡಿತ್ತು. ಬಾಗ್ಮನೆಯ ಮನವಿ ಪರಿಗಣಿಸಿದ್ದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌. ಪಾಟೀಲ್‌, 'ಪ್ರಾಧಿಕಾರಗಳು ಅಕ್ರಮ ಕಟ್ಟಡ ತೆರವು ವೇಳೆ ಕಾನೂನು ಪಾಲಿಸಬೇಕು' ಎಂದು ಆದೇಶಿಸಿದ್ದರು. ಇದರ ವಿರುದ್ಧ ಸಮಾಜ ಪರಿವರ್ತನಾ ಸಮುದಾಯ ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com