ಪಿಎಫ್ಐ ಸಂಘಟನೆ ನಿಷೇಧ; ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ, ಕಾನೂನು ಬಾಹಿರ ಚಟುವಟಿಕೆ ನಡೆಸುವವರ ವಿರುದ್ಧ ಕ್ರಮ: ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್
ಭಾರತ ಸರ್ಕಾರವು ಪಿಎಫ್ಐ (PFI) ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಕಾನೂನು ಬಾಹಿರ ಕಾಯ್ದೆಯಡಿ ಐದು ವರ್ಷಗಳ ಅವಧಿಗೆ ನಿಷೇಧಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಪೊಲೀಸರಿಗೆ ಸೂಚಿಸಿದ್ದಾರೆ.
Published: 28th September 2022 12:38 PM | Last Updated: 28th September 2022 02:18 PM | A+A A-

ಡಿಜಿ ಐಜಿಪಿ ಪ್ರವೀಣ್ ಸೂದ್
ಬೆಂಗಳೂರು: ಭಾರತ ಸರ್ಕಾರವು ಪಿಎಫ್ಐ (PFI) ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಕಾನೂನು ಬಾಹಿರ ಕಾಯ್ದೆಯಡಿ ಐದು ವರ್ಷಗಳ ಅವಧಿಗೆ ನಿಷೇಧಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಪೊಲೀಸರಿಗೆ ಸೂಚಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಮುಸ್ಲಿಂ ಮುಖಂಡರೊಂದಿಗೆ ಮಾತನಾಡಿ, ಸ್ಥಳೀಯವಾಗಿ ಶಾಂತಿ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ. ಶಾಂತಿ ಕದಡಲು ಯತ್ನಿಸುವವರನ್ನು ವಶಕ್ಕೆ ಪಡೆಯುವಂತೆ ಸೂಚಿಸಲಾಗಿದೆ.
ಕೇಂದ್ರ ಸರ್ಕಾರ ಸಂಘಟನೆ ನಿಷೇಧಿಸಿದ ನಂತರ ಯಾವುದೇ ಪ್ರತಿಭಟನೆ ನಡೆದಿಲ್ಲ. ಯಾರಾದರೂ ಪ್ರತಿಭಟನೆ, ಘರ್ಷಣೆ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಪೊಲೀಸರು ಅಲರ್ಟ್ ಆಗಿದ್ದು, ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ಕರ್ನಾಟಕ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಎಚ್ಚರಿಕೆ ನೀಡಿದ್ದಾರೆ.
ಪಿಎಫ್ಐ ನಿಷೇಧ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ನಿಗಾ ವಹಿಸುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ನೀಡಿದ್ದಾರೆ. ಮುಸ್ಲಿಂ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿರುವ ಟ್ಯಾನರಿ ರಸ್ತೆ, ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ, ಶಿವಾಜಿನಗರದಲ್ಲಿ ಗಸ್ತು ಆರಂಭಿಸಿ. ಮುಸ್ಲಿಂ ಮುಖಂಡರ ಜೊತೆಗೆ ಮಾತನಾಡುವಂತೆ ಸೂಚಿಸಿದ್ದಾರೆ. ನಗರದಲ್ಲಿರುವ ಎಲ್ಲ ಪಿಎಫ್ಐ ಕಚೇರಿಗಳಿಗೆ ಬೀಗಮುದ್ರೆ ಹಾಕುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ: ಎನ್ ಐಎ ದಾಳಿ ಬೆನ್ನಲ್ಲೇ ದೇಶಾದ್ಯಂತ ಪಿಎಫ್ ಐ ಸಂಘಟನೆ ಐದು ವರ್ಷ ಬ್ಯಾನ್: ಕೇಂದ್ರ ಸರ್ಕಾರದ ಮಹತ್ವದ ಆದೇಶ
ದೇಶದ ಮಟ್ಟದಲ್ಲಿ ಪಿಎಫ್ಐ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರವು ಆದೇಶ (PFI Ban) ಹೊರಡಿಸಿದೆ. ಮುಂದಿನ ದಿನಗಳಲ್ಲಿ ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಪ್ರತ್ಯೇಕ ಆದೇಶ ಹೊರಡಿಸಿ, ನಿಷೇಧದ ಬಗ್ಗೆ ಸ್ಪಷ್ಟ ಸೂಚನೆ ನೀಡಲಿದ್ದಾರೆ ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಹೇಳಿದರು. ಪಿಎಫ್ಐ ನಿಷೇಧ ಕುರಿತು ಮಾಹಿತಿ ನೀಡಿರುವ ಅವರು, ಎನ್ಐಎ ಅಧಿಕಾರಿಗಳು ಕಳೆದ 22ರಂದು ರಾಜ್ಯದಲ್ಲಿ ದಾಳಿ ನಡೆಸಿ ಹಲವರನ್ನು ಬಂಧಿಸಿದ್ದರು.