ಭಯೋತ್ಪಾದಕ ಸಂಘಟನೆಗಳ ವಿರುದ್ಧ ಐತಿಹಾಸಿಕ ಕ್ರಮ: ಪಿಎಫ್ ಐ ನಿಷೇಧದ ಬಗ್ಗೆ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ

ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿರುವುದು ಸ್ವಾಗತಾರ್ಹ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ

ಬೆಂಗಳೂರು: ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿರುವುದು ಸ್ವಾಗತಾರ್ಹ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಮಹತ್ವದ ಬೆಳವಣಿಗೆಯೊಂದರಲ್ಲಿ ಪಿಎಫ್ಐ ಹಾಗೂ ಅದರ ಇತರ ಸಹವರ್ತಿ ಸಂಸ್ಥೆಗಳನ್ನು, ಐದು ವರ್ಷಗಳ ವರೆಗೆ ಯುಎಪಿಎ ಕಾಯಿದೆ ಅಡಿಯಲ್ಲಿ ನಿಷೇಧಿಸಿದೆ. ಇದನ್ನು ನಾನು ಸ್ವಾಗತಿಸುತ್ತೇನೆ ಎಂದರು.

ದೇಶದಲ್ಲಿ ಕೋಮು ಸೌಹಾರ್ದ ಕೆಡಿಸಿ, ಭಯೋತ್ಪಾದಕ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ ಪಿಎಫ್ಐ ಹಾಗೂ ಅದರ ಇತರ ಸಹ ಸಂಸ್ಥೆಗಳ ವಿರುದ್ಧ ಕೇಂದ್ರ ಸರಕಾರ ಸೂಕ್ತ ಕ್ರಮ ತೆಗೆದುಕೊಂಡಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.

ಪಿಎಫ್‌ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಐದು ವರ್ಷಗಳ ಅವಧಿಗೆ ನಿಷೇಧ ವಿಧಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.

ಪಿಎಫ್ಐ ನಾಯಕರ ಮೇಲೆ ರಾಷ್ಟ್ರಾದ್ಯಂತ ಎನ್ಐಎ ದಾಳಿ ನಡೆದ ಬೆನ್ನಲ್ಲೇ ಸಂಘಟನೆಯನ್ನು ನಿಷೇಧ ಮಾಡಲಾಗಿದೆ. ಸಂಘಟನೆಯ ರಾಷ್ಟ್ರೀಯ ನಾಯಕರನ್ನು ಒಳಗೊಂಡು ಹಲವರನ್ನು ಎನ್ಐಎ ಬಂಧನ ಮಾಡಿದೆ. ಮಂಗಳವಾರ ರಾಜ್ಯದಲ್ಲಿ ಮುಂಜಾಗರೂಕತಾ ಕ್ರಮವಾಗಿ ಹಲವು ಪಿಎಫ್ಐ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಈ ಮೂಲಕ ನಿಷೇಧದ ಸುಳಿವು ನೀಡಲಾಗುತ್ತು. ಇದೀಗ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com