ಪ್ರವಾದಿ ಮುಹಮ್ಮದ್ ಕುರಿತು ಪ್ರಬಂಧ ಸ್ಪರ್ಧೆ: ಗದಗ ಜಿಲ್ಲೆ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕ ಅಮಾನತು

ಗದಗ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಆವರಣದಲ್ಲಿ ಪ್ರವಾದಿ ಮುಹಮ್ಮದ್ ಕುರಿತು ಪ್ರಬಂಧ ಸ್ಪರ್ಧೆ ನಡೆಸಿದ ಆರೋಪದ ಮೇಲೆ ಸರ್ಕಾರಿ ಶಾಲೆಯ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ.
ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ, ನಾಗಾವಿ
ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ, ನಾಗಾವಿ

ಹುಬ್ಬಳ್ಳಿ: ಗದಗ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಆವರಣದಲ್ಲಿ ಪ್ರವಾದಿ ಮುಹಮ್ಮದ್ ಕುರಿತು ಪ್ರಬಂಧ ಸ್ಪರ್ಧೆ ನಡೆಸಿದ ಆರೋಪದ ಮೇಲೆ ಸರ್ಕಾರಿ ಶಾಲೆಯ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ.

ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತ ಸಿದ್ರಾಮಪ್ಪ ಶ್ರೀಶೈಲ ಬಿರಾದಾರ್ ಅವರ ಆದೇಶದ ಮೇರೆಗೆ ಗದಗ ಜಿಲ್ಲೆಯ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಅಬ್ದುಲ್ ಮುನಾಫ್ ಲಾಡ್ ಸಾಹೇಬ್ ಬಿಜಾಪುರ ಎಂಬುವರನ್ನು ಅಮಾನತುಗೊಳಿಸಲಾಗಿದೆ.

ಕಳೆದ ವಾರ ಮುಖ್ಯಶಿಕ್ಷಕ ಮುನಾಫ್ ಬಿಜಾಪುರ ಅವರು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಆಕರ್ಷಕ ನಗದು ಬಹುಮಾನವನ್ನೂ ಘೋಷಿಸಿದ್ದರು. ಸ್ಪರ್ಧೆ ವಿಚಾರ ತಿಳಿದ ಕೆಲ ಬಲಪಂಥೀಯ ಸಂಘಟನೆ ಸದಸ್ಯರು ನಾಗಾವಿ ಗ್ರಾಮದ ಶಾಲೆಗೆ ಭೇಟಿ ನೀಡಿ, ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಗದಗ ಗ್ರಾಮಾಂತರ ಠಾಣೆ ಪೊಲೀಸರು ಆಗಮಿಸಿ ಸಮಾಧಾನಪಡಿಸಿದ ಬಳಿಕ ಗುಂಪು ಅಲ್ಲಿಂದ ತೆರಳಿತು.

ಕ್ಷಮೆಯಾಚಿಸಿದ ಪ್ರಾಂಶುಪಾಲರು

ಪ್ರಾಂಶುಪಾಲ ಮುನಾಫ್ ಬಿಜಾಪುರ್, 'ನಾನು ಯಾವುದೇ ತಪ್ಪು ಉದ್ದೇಶವಿಲ್ಲದೆ ಸ್ಪರ್ಧೆಯನ್ನು ಆಯೋಜಿಸಿದೆ. ಗದಗದ ಖ್ಯಾತ ಮುಸ್ಲಿಂ ಮುಖಂಡ ಜುನೇದಸಾಬ್ ಉಮಚಗಿ ಅವರು ಕೆಲವು ದಿನಗಳ ಹಿಂದೆ ನಮ್ಮ ಶಾಲೆಗೆ ಭೇಟಿ ನೀಡಿ ಮುಹಮ್ಮದ್ ಪೈಗಂಬರ್ ಅವರ ಕುರಿತಾದ ಎರಡು ಪುಸ್ತಕಗಳನ್ನು ಉಡುಗೊರೆಯಾಗಿ ನೀಡಿದ್ದರು. ನಂತರ ನಾನು ಸ್ಪರ್ಧೆಯನ್ನು ಆಯೋಜಿಸಿದ್ದೆ. ನಗದು ಬಹುಮಾನವು ವಿದ್ಯಾರ್ಥಿಗಳಿಗೆ ಸಹಾಯವಾಗುತ್ತದೆ ಎಂದು ಭಾವಿಸಿದೆ. ನಾನು ಈಗಾಗಲೇ ಪ್ರತಿಭಟನಾಕಾರರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳಲ್ಲಿ ಕ್ಷಮೆಯಾಚಿಸಿದ್ದೇನೆ' ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com