ಬಾಗ್ಮನೆ ಟೆಕ್‌ಪಾರ್ಕ್‌ ಒತ್ತುವರಿ ತೆರವು: ಲೋಕಾಯುಕ್ತ ಹಸ್ತಕ್ಷೇಪಕ್ಕೆ ಹೈಕೋರ್ಟ್‌ ಅಸಮಾಧಾನ!

ಬಾಗಮನೆ ಟೆಕ್‌ಪಾರ್ಕ್‌ ಬಳಿಯ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೈಗೊಂಡ ಕಾರ್ಯಾಚರಣೆ ವಿರುದ್ಧದ ದೂರಿನ ವಿಚಾರಣೆ ನಡೆಸಿದ ಲೋಕಾಯುಕ್ತರ ನಡೆಗೆ ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಬಾಗಮನೆ ಟೆಕ್‌ಪಾರ್ಕ್‌ ಬಳಿಯ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೈಗೊಂಡ ಕಾರ್ಯಾಚರಣೆ ವಿರುದ್ಧದ ದೂರಿನ ವಿಚಾರಣೆ ನಡೆಸಿದ ಲೋಕಾಯುಕ್ತರ ನಡೆಗೆ ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಈ ಸಂಬಂಧ ಧಾರವಾಡದ ಸಮಾಜ ಪರಿವರ್ತನಾ ಸಮುದಾಯದ (ಎಸ್‌ಪಿಎಸ್‌) ಸಂಸ್ಥಾಪಕ ಅಧ್ಯಕ್ಷ ಎಸ್‌.ಆರ್‌. ಹಿರೇಮಠ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಒತ್ತುವರಿ ತೆರವಿಗೆ ಲೋಕಾಯುಕ್ತ ಕಚೇರಿಯೇ ತಡೆ ನೀಡಬಹುದೇನು, ಹಾಗಿದ್ದರೆ ಜನರು ಕೋರ್ಟ್ ಬದಲಿಗೆ ಲೋಕಾಯುಕ್ತಕ್ಕೆ ಹೋಗಬಹುದಲ್ಲವೇ ಎಂದು ಕಿಡಿ ಕಾರಿದೆ. ವ್ಯಾಪ್ತಿ ಮೀರಿದ ಆದೇಶ ನೀಡಲು ನಾವು ಅವಕಾಶ ನೀಡುವುದಿಲ್ಲ’ ಎಂದು ಸ್ಪಷ್ಟಪಡಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನಡೆಸುತ್ತಿರುವ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com