ಚಿಕ್ಕಮಗಳೂರು: ಎಸ್ ಡಿಪಿಐ, ಪಿಎಫ್ಐ ಮುಖಂಡರ ಕಚೇರಿ, ಮನೆ ಮೇಲೆ ಪೊಲೀಸರ ದಾಳಿ

ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಎನ್ಐಎ ದಾಳಿ ನಡೆದು ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದ ಬೆನ್ನಲ್ಲೇ ಗುರುವಾರ ಚಿಕ್ಕಮಗಳೂರು ಜಿಲ್ಲೆಯ ಎಸ್​ಡಿಪಿಐ (SDPI) ಕಚೇರಿ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.
ಎಸ್ ಡಿಪಿಐ ಕಚೇರಿ ಮೇಲೆ ದಾಳಿ
ಎಸ್ ಡಿಪಿಐ ಕಚೇರಿ ಮೇಲೆ ದಾಳಿ

ಚಿಕ್ಕಮಗಳೂರು: ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಎನ್ಐಎ ದಾಳಿ ನಡೆದು ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದ ಬೆನ್ನಲ್ಲೇ ಗುರುವಾರ ಚಿಕ್ಕಮಗಳೂರು ಜಿಲ್ಲೆಯ ಎಸ್​ಡಿಪಿಐ (SDPI) ಕಚೇರಿ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.

ಪಿಎಫ್​ಐ ಜಿಲ್ಲಾಧ್ಯಕ್ಷ ಚಾಂದ್ ಪಾಷಾ ಮನೆ ಮೇಲೆ ಪೊಲೀಸ್​ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದರು. ಈ ವೇಳೆ ದಾಳಿ ಮಾಡುತ್ತಿರುವ ಬಗ್ಗೆ ಚಾಂದ್ ಪಾಷಾ ಪ್ರಶ್ನೆ ಮಾಡಿದ್ದಾರೆ. ಚಾಂದ್ ಪಾಷಾ ಪ್ರಶ್ನೆಗೆ ನಿಮಗೆ ಉತ್ತರಿಸುವ ಅಗತ್ಯವಿಲ್ಲ, ನಮಗೆ ಆದೇಶ ಬಂದಿದೆ ಎಂದು ಹೇಳಿ ಅವರ ಮನೆಯೊಳಗೆ ಹೋಗಿ ಶೋಧ ಕಾರ್ಯ ನಡೆಸಿದ್ದಾರೆ. ಪಿಎಫ್​ಐ ಕಾರ್ಯಕರ್ತ ಆಗಿರುವ ಆರೀಫ್ ಮನೆಗೂ ಡಿಸಿ ಮಾರ್ಗದರ್ಶನ ಮೇರೆಗೆ ಪೊಲೀಸ್ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಎರಡು ದಿನದ ಹಿಂದೆ ಠಾಣೆಗೆ ಬಂದು ಹಾಜರಾಗುವಂತೆ ಪೊಲೀಸರು ಸೂಚಿಸಿದ್ದರು.

ಠಾಣೆಗೆ ಹಾಜರಾಗದ ಹಿನ್ನೆಲೆ ಜಿಲ್ಲಾಧಿಕಾರಿಯಿಂದ ಸರ್ಚ್ ವಾರೆಂಟ್ ನೀಡಿದ್ದು, ಇಂದು ಮನೆ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ಮಾಡಲಾಗಿದೆ. ಸಿಪಿಐ ಸತ್ಯನಾರಾಯಣ, ಪಿಎಸ್ಐಗಳಾಧ ಸಜಿತ್, ಕೀರ್ತಿ ಕುಮಾರ್ ಹಾಗೂ ಸಿಬ್ಬಂದಿಗಳಿಂದ ದಾಳಿ ಮಾಡಿದ್ದು, ಪೊಲೀಸರಿಗೆ ಕಂದಾಯ ಇಲಾಖೆ ಅಧಿಕಾರಿಗಳು ಸಾಥ್ ನೀಡಿದರು.

ಇನ್ನು ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ರಾಜ್ಯದಲ್ಲಿ ಎಸ್ ಡಿಪಿಐ ಸಂಘಟನೆಯನ್ನು ಕೂಡ ಮುಂದಿನ ದಿನಗಳಲ್ಲಿ ನಿಷೇಧಿಸುತ್ತೇವೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com