ಬೆಂಗಳೂರು: ಶೀಘ್ರವೇ 1,051 ರಸ್ತೆ ಗುಂಡಿ ಮುಚ್ಚಲು ಸೂಚನೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ರವರ ಅಧ್ಯಕ್ಷತೆಯಲ್ಲಿ ಗುರುವಾರ ನಾನಾ ಇಲಾಖೆಗಳ ಜೊತೆ ಸಮನ್ವಯ ಸಭೆ ನಡೆಯಿತು.
Published: 30th September 2022 01:40 PM | Last Updated: 30th September 2022 02:20 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ರವರ ಅಧ್ಯಕ್ಷತೆಯಲ್ಲಿ ಗುರುವಾರ ನಾನಾ ಇಲಾಖೆಗಳ ಜೊತೆ ಸಮನ್ವಯ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, "ಬೆಂಗಳೂರಿನ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಸಂಚಾರಿ ಪೊಲೀಸ್ ಇಲಾಖೆಯಿಂದ 4,545 ರಸ್ತೆ ಗುಂಡಿಗಳನ್ನು ಗುರುತಿಸಲಾಗಿದೆ. ಈ ಪೈಕಿ 1,051 ರಸ್ತೆ ಗುಂಡಿಗಳನ್ನು ಮುಚ್ಚುವುದು ಬಾಕಿಯಿದೆ. ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಪಾಲಿಕೆ ವತಿಯಿಂದ ಕೂಡಲೇ ರಸ್ತೆ ಗುಂಡಿಗಳನ್ನು ಮುಚ್ಚಬೇಕು" ಎಂದರು.
ಬೆಂಗಳೂರಿನ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಸಂಚಾರಿ ಪೊಲೀಸ್ ವಿಭಾಗದಿಂದ ಗುರುತಿಸಿದ್ದ ರಸ್ತೆಗುಂಡಿಗಳ ಪೈಕಿ ಬಾಕಿ 1,051 ರಸ್ತೆ ಗುಂಡಿಗಳನ್ನು ಜಂಟಿ ಕಾರ್ಯಾಚರಣೆ ನಡೆಸಿ ತ್ವರಿತವಾಗಿ ಮುಚ್ಚಲು ಬಿಬಿಎಂಪಿ ಆಡಳಿತಗಾರ ರಾಕೇಶ್ ಸಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ಸುಮನಹಳ್ಳಿ ಮೇಲ್ಸೇತುವೆಯಲ್ಲಿ ಮತ್ತೆ ಗುಂಡಿ, ಬಿಬಿಎಂಪಿಯ ಕಳಪೆ ಕಾಮಗಾರಿಗೆ ಸಾರ್ವಜನಿಕರ ಟೀಕೆ!
ಮುಂದಿನ ಸಭೆಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಅಧಿಕಾರಿಗಳನ್ನು ಆಹ್ವಾನಿಸಲು ಹೇಳಿದರು. ನಗರದಲ್ಲಿ ಹೆಚ್ಚು ಸಂಚಾರ ದಟ್ಟಣೆಯಾಗುವ ಪ್ರಮುಖ 8 ಜಂಕ್ಷನ್, ಸಿಲ್ಕ್ ಬೋರ್ಡ್ ಜಂಕ್ಷನ್, ಜಯದೇವ ಜಂಕ್ಷನ್, ಎಂ.ಎಂ.ಟೆಂಪಲ್ ಜಂಕ್ಷನ್ (ಟಿನ್ ಪ್ಯಾಕ್ಟರಿ), ಹೆಬ್ಬಾಳ ಜಂಕ್ಷನ್, ಗೊರಗುಂಟೆಪಾಳ್ಯ ಜಂಕ್ಷನ್, ಸಾರಕ್ಕಿ ಜಂಕ್ಷನ್, ಕೆ.ಎಸ್.ಲೇಔಟ್ ಜಂಕ್ಷನ್, ಬನಶಂಕರಿ ಜಂಕ್ಷನ್ ಗಳಲ್ಲಿ ತೆಗದುಕೊಳ್ಳಬೇಕಿರುವ ಬಾಕಿ ಕ್ರಮಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು" ಎಂದು ತಿಳಿಸಿದರು.