ಹಾಸನ: ಮಹಿಳಾ ಎಸ್‌ಐ ಮೇಲೆ ಹಲ್ಲೆ; ಜಿ.ಪಂ ಸದಸ್ಯನ ಬಂಧನ!

ಜಾವಗಲ್ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಜಿಲ್ಲಾ ಪಂಚಾಯತ್ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹಾಸನ: ಜಾವಗಲ್ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಜಿಲ್ಲಾ ಪಂಚಾಯತ್ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ. 

ಅರಸೀಕೆರೆ ತಾಲೂಕಿನ ನೇರ್ಲಿಗೆ ಗ್ರಾಮ ಪಂಚಾಯಿತಿ ಸದಸ್ಯ ಶ್ರೀನಿವಾಸ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಜೂಜುಕೋರರನ್ನು ಸಬ್ ಇನ್ಸ್ ಪೆಕ್ಟರ್ ಶೋಭಾ ಭರಮಕ್ಕನವರ್ ಅವರು ಬಂಧಿಸಿದ್ದರು. ಈ ಬಗ್ಗೆ ವಿಚಾರಿಸಲು ಜಾವಗಲ್ ಠಾಣೆಗೆ ಶ್ರೀನಿವಾಸ್ ತೆರಳಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಕುಡಿದಿದ್ದ ಶ್ರೀನಿವಾಸ್ ಪೊಲೀಸ್ ಠಾಣೆಗೆ ನುಗ್ಗಿ ಎಸ್‌ಐ ಅವರನ್ನು ಎಳೆದೊಯ್ದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಜಾವಗಲ್ ಹೊರವಲಯದಲ್ಲಿರುವ ಜೂಜು ಅಡ್ಡೆಗಳ ಮೇಲೆ ಆಗಾಗ್ಗೆ ದಾಳಿ ನಡೆಸುತ್ತಿರುವುದಕ್ಕೆ ಶ್ರೀನಿವಾಸ್ ಆಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಂತದಲ್ಲಿ ಪೊಲೀಸರು ಶ್ರೀವಾಸ್‌ನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com