ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ನೂತನ ಉಪಕುಲಪತಿಯಾಗಿ ಪ್ರೊ. ಎಸ್ ವಿದ್ಯಾಶಂಕರ್ ನೇಮಕ!
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ನೂತನ ಉಪಕುಲಪತಿಯಾಗಿ ಪ್ರೊ.ಎಸ್.ವಿದ್ಯಾಶಂಕರ್ ಅವರನ್ನು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ನೇಮಕ ಮಾಡಿದ್ದಾರೆ.
Published: 30th September 2022 12:43 AM | Last Updated: 30th September 2022 02:13 PM | A+A A-

ಪ್ರೊ.ಎಸ್.ವಿದ್ಯಾಶಂಕರ್
ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ನೂತನ ಉಪಕುಲಪತಿಯಾಗಿ ಪ್ರೊ.ಎಸ್.ವಿದ್ಯಾಶಂಕರ್ ಅವರನ್ನು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ನೇಮಕ ಮಾಡಿದ್ದಾರೆ.
ಪ್ರೊ.ಎಸ್.ವಿದ್ಯಾಶಂಕರ್ ಅವರು ಶುಕ್ರವಾರ ಬೆಳಗಾವಿಯ ವಿಟಿಯು ಮುಖ್ಯ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.
ಪ್ರೊ.ವಿದ್ಯಾಶಂಕರ್ ಅವರು ಕಳೆದ ಕೆಲವು ವರ್ಷಗಳಿಂದ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (KSOU) ಉಪಕುಲಪತಿಯಾಗಿದ್ದರು. ಸೆಪ್ಟೆಂಬರ್ 24 ರಂದು ರಾಜಭವನದಲ್ಲಿ ಸಭೆ ನಡೆಸಿದ ವಿಸಿ ಶೋಧನಾ ಸಮಿತಿಯು ಶಾರ್ಟ್‌ಲಿಸ್ಟ್ ಮಾಡಿದ ಮೂವರು ಅಭ್ಯರ್ಥಿಗಳಲ್ಲಿ ಪ್ರೊ.ವಿದ್ಯಾಶಂಕರ್ ಅವರು ಒಬ್ಬರಾಗಿದ್ದರು.