ಚುನಾವಣೆ ನೀತಿ ಸಂಹಿತೆ ಜಾರಿ ಎಫೆಕ್ಟ್: ಔಷಧ, ಆ್ಯಂಬುಲೆನ್ಸ್'ಗಳ ಟೆಂಡರ್ ಪ್ರಕ್ರಿಯೆಯಲ್ಲಿ ವಿಳಂಬ!

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದು, ಇದರಿಂದಾಗಿ ವಾರ್ಷಿಕ ಔಷಧ ಖರೀದಿ, ಡಯಾಲಿಸಿಸ್ ಮತ್ತು 108 ಆ್ಯಂಬುಲೆನ್ಸ್‌ಗಳ ಟೆಂಡರ್ ಪ್ರಕ್ರಿಯೆಯಲ್ಲಿ ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದು, ಇದರಿಂದಾಗಿ ವಾರ್ಷಿಕ ಔಷಧ ಖರೀದಿ, ಡಯಾಲಿಸಿಸ್ ಮತ್ತು 108 ಆ್ಯಂಬುಲೆನ್ಸ್‌ಗಳ ಟೆಂಡರ್ ಪ್ರಕ್ರಿಯೆಯಲ್ಲಿ ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಡಿ ರಂದೀಪ್ ಮಾತನಾಡಿ, “ಎಲ್ಲಾ ಸೇವೆಗಳು ಬಹುತೇಕ ಉಚಿತ ಮತ್ತು ಆರೋಗ್ಯ ತುರ್ತು ಸೇವೆಯಾಗಿರುವುದರಿಂದ ಚುನಾವಣಾ ನೀತಿ ಸಂಹಿತೆ ಆರೋಗ್ಯ ಯೋಜನೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈ ಕುರಿತು ಕಾರ್ಯಗಳು ಎಂದಿನಂತೆ ಮುಂದುವರಿಯುತ್ತದೆ. ಆದರೆ, ಟೆಂಡರ್ ಪ್ರಕ್ರಿಯೆಗಳಲ್ಲಿ ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.

ನೀತಿ ಸಂಹಿತೆ ಜಾರಿಯು ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನರೋಗ ಯೋಜನೆ (ABMP JAY) ಗಾಗಿ ಕಾರ್ಡ್‌ಗಳ ವಿತರಣೆಯ ಮೇಲೂ ಬೀರಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಕಾರ್ಡ್ ಗಳ ವಿತರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ರಂದೀಪ್ ಅವರು, ಕಾರ್ಡ್ ವಿತರಣೆಯು ತುರ್ತು ಆರೋಗ್ಯ ಯೋಜನೆ ಅಡಿಯಲ್ಲಿ ಬರುವುದರಿಂದ ಕಾರ್ಡ್ ವಿತರಣೆ ಕುರಿತು ಚುನಾವಣಾ ಆಯೋಗ ಪರಿಶೀಲನೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

3-4 ತಿಂಗಳುಗಳಿಂದ ಆರೋಗ್ಯ ಇಲಾಖೆಯ ಹಲವಾರು ಟೆಂಡರ್‌ಗಳು ಪ್ರಕ್ರಿಯೆಯ ಹಂತದಲ್ಲಿವೆ, ಚುನಾವಣೆಯ ಕಾರಣ ಈ ಟೆಂಡರ್ ಗಳು ವಿಳಂಬವಾಗುವ ಸಾಧ್ಯತೆಗಳಿದ್ದು, ಇದರ ಪರಿಣಾಮ ನಾಗರೀಕರ ಮೇಲೆ ಬೀರಲಿದೆ ಎಂದು ಹೇಳಲಾಗುತ್ತಿದೆ.

ಚುನಾವಣಾ ಸಮಯ ಹಿನ್ನೆಲೆಯಲ್ಲಿ ಮುಂಬರುವ ತಿಂಗಳುಗಳಲ್ಲಿ ಸೋಂಕು ಉಲ್ಬಣಗೊಳ್ಳದಂತೆ ನೋಡಿಕೊಳ್ಳಲು, ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಲು ಇಸಿ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳನ್ನು ಪರಿಶೀಲಿಸುವಂತೆ ತಾಂತ್ರಿಕ ಸಲಹಾ ಸಮಿತಿಗೆ (ಟಿಎಸಿ) ಸೂಚನೆ ನೀಡಲಾಗಿದೆ.

ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮಾರ್ಗಸೂಚಿಯಲ್ಲಿ ಚುನಾವಣಾ-ಸಂಬಂಧಿತ ಚಟುವಟಿಕೆಗಳಲ್ಲಿ ತೊಡಗಿರುವ ಜನರು ಕೋವಿಡ್ ಸೂಕ್ತ ನಡವಳಿಕೆಯನ್ನು (CAB) ಅನುಸರಿಸುವಂತೆ ಸೂಚಿಸಲಾಗಿದೆ.

ಎಲ್ಲಾ ಅರ್ಹ ಮತಗಟ್ಟೆ ಸಿಬ್ಬಂದಿ, ಭದ್ರತಾ ಸಿಬ್ಬಂದಿ ಮತ್ತು ಎಣಿಕೆ ಸಿಬ್ಬಂದಿ ಸಂಪೂರ್ಣವಾಗಿ ಲಸಿಕೆಯನ್ನು ಪಡೆದಿರಬೇಕಾಗಿದೆ. ಪ್ರಮುಖವಾಗಿ ಬೂಸ್ಟರ್ ಡೋಸ್ ತೆಗೆದುಕೊಂಡಿರಬೇಕು. ಹೊರಾಂಗಣ/ಒಳಾಂಗಣ ಸಭೆಗಳು, ರ್ಯಾಲಿಗಳು ಅಥವಾ ಯಾತ್ರೆಗಳ ಸಮಯದಲ್ಲಿ ಕೋವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸದಿದ್ದರೆ, ಸಂಘಟಕರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಎಚ್ಚರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com