ಬೆಂಗಳೂರು: ಬೆಂಗಳೂರಿನ ಆರ್‌ಆರ್‌ನಗರ ಕ್ಷೇತ್ರದಲ್ಲಿ ನೆಲೆಸಿರುವ ತಮಿಳುಗರನ್ನು ಕನ್ನಡಿಗರ ವಿರುದ್ಧ ಎತ್ತಿಕಟ್ಟಲು ಯತ್ನಿಸಿದ ಸಚಿವ ಮುನಿರತ್ನ ಅವರನ್ನು ಬಂಧನಕ್ಕೊಳಪಡಿಸಬೇಕೆಂದು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರು ಶುಕ್ರವಾರ ಒತ್ತಾಯಿಸಿದ್ದಾರೆ.
ದ್ದಿಗಾರರೊಂದಿಗೆ ಮಾತನಾಡಿದ ಅವರು, ಭಯದ ವಾತಾವರಣ ನಿರ್ಮಾಣ ಮಾಡಿರುವ ಸಚಿವ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು
ಮುನಿರತ್ನ ತಮ್ಮ ರಾಜಕೀಯ ಲಾಭಕ್ಕಾಗಿ ಕನ್ನಡಿಗರು ಮತ್ತು ತಮಿಳರ ನಡುವೆ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ, ಈ ಬಗ್ಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಅವರು ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಚುನಾವಣಾ ಆಯೋಗಕ್ಕೂ ಕಾಂಗ್ರೆಸ್ ದೂರು ನೀಡಲಿದೆ ಎಂದು ಹೇಳಿದರು.
ತಮ್ಮ ಪಕ್ಷದ ಕೇಂದ್ರ ನಾಯಕರ ಭೇಟಿಯಲ್ಲಿ ಬಿಜೆಪಿ ನಾಯಕರು ಹಣ ಗಳಿಸುತ್ತಿದ್ದಾರೆ. ಪ್ರಧಾನಿ ಮೋದಿ ಏಳು ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದು, ಇಂತಹ ಭೇಟಿ ಸಂದರ್ಭಗಳನ್ನು ಬಳಸಿಕೊಂಡು ಸ್ಥಳೀಯ ನಾಯಕರು ಹಣ ಮಾಡಿಕೊಳ್ಳುತ್ತಿದ್ದಾರೆಂದು ಆರೋಪಿಸಿದರು.
ಕೆಐಎಯಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ 30 ಕೋಟಿ ರೂಪಾಯಿ ಖರ್ಚು ಮಾಡಿದೆ. ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರದಿದ್ದರೂ ವಿಮಾನ ನಿಲ್ದಾಣ ರಸ್ತೆ ದುರಸ್ತಿ 8.50 ಕೋಟಿ ವೆಚ್ಚ ಮಾಡಲಾಗಿದೆ. ಪೆಂಡಾಲ್ ಹಾಕಲು ರೂ.12 ಕೋಟಿ, ಕುಡಿಯುವ ನೀರಿಗೆ 1 ಕೋಟಿ ಖರ್ಚು ಮಾಡಲಾಗಿದೆ, ಇತರೆ ಸ್ಥಳಗಳಿಂದ ಜನರನ್ನು ಕಾರ್ಯಕ್ರಮಕ್ಕೆ ಕರೆತರಲು ರೂ.6.5 ಕೋಟಿ ವೆಚ್ಚ ಮಾಡಿದ್ದಾರೆಂದು ಆರೋಪಿಸಿದ್ದಾರೆ.
Advertisement