ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳು ಮತದಾರರ ಮಾಹಿತಿ ಸಂಗ್ರಹಿಸುವಂತಿಲ್ಲ: ತುಷಾರ್ ಗಿರಿನಾಥ್

ರಾಜಕೀಯ ಪಕ್ಷದ ಕಾರ್ಯಕರ್ತರು ಮತ್ತು ಅಭ್ಯರ್ಥಿಗಳು ಅಥವಾ ಅವರ ಬೆಂಬಲಿಗರು ಮತದಾರರ ಮಾಹಿತಿಗಳನ್ನು ಸಂಗ್ರಹಿಸುವಂತಿಲ್ಲ. ಮಾಹಿತಿ ಸಂಗ್ರಹಿಸುತ್ತಿರುವ ಕುರಿತು ದೂರು ಬಂದಿದ್ದೇ ಆದರೆ, ಎಫ್ಐಆರ್ ದಾಖಲಿಸುತ್ತೇವೆಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ಎಚ್ಚರಿಸಿದ್ದಾರೆ.
ತುಷಾರ್ ಗಿರಿನಾಥ್
ತುಷಾರ್ ಗಿರಿನಾಥ್

ಬೆಂಗಳೂರು: ರಾಜಕೀಯ ಪಕ್ಷದ ಕಾರ್ಯಕರ್ತರು ಮತ್ತು ಅಭ್ಯರ್ಥಿಗಳು ಅಥವಾ ಅವರ ಬೆಂಬಲಿಗರು ಮತದಾರರ ಮಾಹಿತಿಗಳನ್ನು ಸಂಗ್ರಹಿಸುವಂತಿಲ್ಲ. ಮಾಹಿತಿ ಸಂಗ್ರಹಿಸುತ್ತಿರುವ ಕುರಿತು ದೂರು ಬಂದಿದ್ದೇ ಆದರೆ, ಎಫ್ಐಆರ್ ದಾಖಲಿಸುತ್ತೇವೆಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ಎಚ್ಚರಿಸಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮತಚೀಟಿಗಳ ಸಂಗ್ರಹಣೆ ಅಥವಾ ಮತದಾರರ ಕುರಿತು ಮಾಹಿತಿ ಪಡೆಯಲು ಯಾವುದೇ ಉಮೇದುದಾರರಿಗೆ ಅಥವಾ ಪಕ್ಷಗಳಿಗೆ ಅವಕಾಶವಿಲ್ಲ. ಮಾಹಿತಿ ಪಡೆಯುತ್ತಿರುವಂತಹ ಘಟನೆಗಳು ಗಮನಕ್ಕೆ ಬಂದಿದ್ದೇ ಆದರೆ, ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ. ಪ್ರಸ್ತುತ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ ಎಂಬುದನ್ನು ಯಾರೂ ಮರೆಯಬಾರದು ಎಂದು ಹೇಳಿದರು.

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ 8 ವಲಯಗಳಿಗೆ ಭೇಟಿ ನೀಡಲಾಗುತ್ತಿದ್ದು, ಮತದಾನ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು, ವೃತ್ತಿಪರರೊಂದಿಗೆ ಮಾತುಕತೆ ನಡೆಸುತ್ತಿದ್ದು, ವೃತ್ತಿಪರರ ಬೆಂಬಲದೊಂದಿಗೆ ಮತದಾರರ ಜಾಗೃತಿ ವೇದಿಕೆಗಳನ್ನು ರಚಿಸುತ್ತೇವೆ. ಜನರು ಹೊರಬಂದು ಮತಹಕ್ಕು ಚಲಾಯಿಸುವಂತೆ ಪ್ರೋತ್ಸಾಹಿಸುತ್ತಿದ್ದೇವೆ. ಮತದಾನ ನಡೆಯುವ ದಿನವನ್ನು ರಜಾ ದಿನವೆಂದು ಪರಿಗಣಿಸದೆ, ಹೊರಬಂದು ಮತಹಾಕುವಂತೆ ಮನವಿ ಮಾಡತ್ತೇವೆಂದು ತಿಳಿಸಿದರು.

ಈಗಾಗಲೇ ಮತದಾರರ ನೋಂದಣಿಗೆ ಸಾಕಷ್ಟು ಸಮಯಾವಕಾಶ ನೀಡಲಾಗಿದೆ. ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ನಮ್ಮ ಗಮನ ಈಗ ಮತದಾರರನ್ನು ಬೂತ್ ಗಳಿಗೆ ಸೆಳೆಯುವುದರ ಮೇಲೆ ಕೇಂದ್ರೀಕೃತವಾಗಿದೆ. ದಾಖಳಾತಿಗೆ ಬರುತ್ತಿರುವವರನ್ನು ಅನುಮಾನದಿಂದ ನೋಡಲಾಗುತ್ತಿದೆ. ಆದರೆ, ಈ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಮತದಾರರು ತಮ್ಮ ಹಕ್ಕುಗಳನ್ನು ಚಲಾಯಿಸಲು ಮತದಾನದ ದಿನ ಬೂತ್ ಗಳಿಗೆ ಬರಬೇಕೆಂದು ಮನವಿ ಮಾಡಿಕೊಂಡರು.

ಸಿವಿಲ್ ಕಾಮಗಾರಿಯಲ್ಲಿ ಗೊಂದಲ ಉಂಟಾಗಿರುವ ಹಿನ್ನೆಲೆಯಲ್ಲಿ ಮಳೆ ನೀರು ಚರಂಡಿ (ಎಸ್‌ಡಬ್ಲ್ಯುಡಿ) ಇಲಾಖೆಗೆ ಸಂಪೂರ್ಣ ವಿನಾಯಿತಿ ನೀಡಲಾಗಿದ್ದು, ಕಾಮಗಾರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

"ಕೆಎಎಸ್ ಅಧಿಕಾರಿಗಳನ್ನು ನೋಡಲ್ ಅಧಿಕಾರಿ ಮತ್ತು ಚುನಾವಣಾಧಿಕಾರಿಗಳಾಗಿ ನೇಮಿಸಲಾಗಿದೆ ಮತ್ತು ಅವರು ಚುನಾವಣಾ ನೀತಿ ಸಂಹಿತೆ ಮತ್ತು ಚುನಾವಣಾ ಕೆಲಸಗಳನ್ನು ನೋಡಿಕೊಳ್ಳುತ್ತಾರೆ. ಆದ್ದರಿಂದ ಸಿವಿಲ್ ಕಾಮಗಾರಿಗಳಿಗೆ ಸಂಬಂಧಿಸಿದ ಕೆಲಸಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಿಳಿಸಿದರು,

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com