ಕಾವೇರಿ ನೀರಾವರಿ ನಿಗಮದ ಮಾಜಿ ಎಂಡಿಗೆ ಸೇರಿದ 1.1 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು!

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಕಾವೇರಿ ನೀರಾವರಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಟಿ.ಎನ್.ಚಿಕ್ಕರಾಯಪ್ಪ ಅವರ 1.10 ಕೋಟಿ ರೂಪಾಯಿ ಮೌಲ್ಯದ ಎರಡು ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡು ಬೆಂಗಳೂರಿನ ಜಾರಿ ನಿರ್ದೇಶನಾಲಯ (ಇಡಿ) ಆದೇಶ ಹೊರಡಿಸಿದೆ.  
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಕಾವೇರಿ ನೀರಾವರಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಟಿ.ಎನ್.ಚಿಕ್ಕರಾಯಪ್ಪ ಅವರ 1.10 ಕೋಟಿ ರೂಪಾಯಿ ಮೌಲ್ಯದ ಎರಡು ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡು ಬೆಂಗಳೂರಿನ ಜಾರಿ ನಿರ್ದೇಶನಾಲಯ (ಇಡಿ) ಆದೇಶ ಹೊರಡಿಸಿದೆ.  

ಚಿಕ್ಕರಾಯಪ್ಪ ಇತರ ಆರೋಪಿಗಳ ನೆರವಿನೊಂದಿಗೆ ಅಕ್ರಮವಾಗಿ 5.33 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಕೇಂದ್ರೀಯ ತನಿಖಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. 

ಅಕ್ರಮ ಹಣದಿಂದ ಪರಿಚಿತ ವ್ಯಕ್ತಿಗಳ ಹೆಸರಿನಲ್ಲಿ ಸ್ಥಿರಾಸ್ತಿ ಖರೀದಿಸಿ, ಅವುಗಳನ್ನು ತಮ್ಮ ಕುಟುಂಬದ ಸದಸ್ಯರ ಹೆಸರಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಚಿಕ್ಕರಾಯಪ್ಪ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ಬೆಂಗಳೂರು ನಗರ (ಈಗ ಕರ್ನಾಟಕ ಲೋಕಾಯುಕ್ತ ಬೆಂಗಳೂರು) ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಇಡಿ ತನಿಖೆ ಆರಂಭಿಸಿದೆ.

ಚಿಕ್ಕರಾಯಪ್ಪ ಮತ್ತು ಇತರ ಆರೋಪಿಗಳ ವಿರುದ್ಧ ಐಪಿಸಿ ಮತ್ತು ಪಿಸಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಎಸಿಬಿ ಸಿಟಿ ಸಿವಿಲ್ ಮತ್ತು ಸೆಷನ್ ನ್ಯಾಯಾಲಯದ ಮುಂದೆ ಚಾರ್ಜ್ ಶೀಟ್ ಕೂಡ ಸಲ್ಲಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com