ಸರ್ಕಾರದ ಮೀಸಲಾತಿ ಕ್ರಮದಿಂದ ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೊಡೆತ: ಶಿಕ್ಷಣ ತಜ್ಞರು

ಮುಸ್ಲಿಮರಿಗೆ ಇದ್ದ ಪ್ರತ್ಯೇಕ ಜಾತಿ ಮೀಸಲಾತಿಯನ್ನು ಕಸಿದುಕೊಂಡಿರುವ ಸರ್ಕಾರದ ಕ್ರಮದ ವಿರುದ್ಧ ವಕೀಲರು ಹಾಗೂ ಶಿಕ್ಷಣ ತಜ್ಞರು ವಾಗ್ದಾಳಿ ನಡೆಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು:  ಮುಸ್ಲಿಮರಿಗೆ ಇದ್ದ ಪ್ರತ್ಯೇಕ ಜಾತಿ ಮೀಸಲಾತಿಯನ್ನು ಕಸಿದುಕೊಂಡಿರುವ ಸರ್ಕಾರದ ಕ್ರಮದ ವಿರುದ್ಧ ವಕೀಲರು ಹಾಗೂ ಶಿಕ್ಷಣ ತಜ್ಞರು ವಾಗ್ದಾಳಿ ನಡೆಸಿದ್ದಾರೆ.

ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ ​​(ಎಐಎಸ್‌ಎ) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸರ್ಕಾರದ ಮೀಸಲಾತಿ ಕುರಿತು ನಿರ್ಧಾರ ಸಮುದಾಯದ ಮೇಲೆ, ವಿಶೇಷವಾಗಿ ಉತ್ತಮ ಶಿಕ್ಷಣ ಪಡೆಯಲು ಹೆಣಗಾಡುತ್ತಿರುವ ಮುಸ್ಲಿಂ ಹುಡುಗಿಯರ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದರ ಮೇಲೆ ಬೆಳಕು ಚೆಲ್ಲಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಕೀಲ ಹಾಗೂ ಶಿಕ್ಷಣ ತಜ್ಞರು ಸರ್ಕಾರದ ವಿರುದ್ಧ ಕಿಡಿಕಾರಿದರು.

“ಮುಸ್ಲಿಂ ಹುಡುಗಿಯರು ಶಿಕ್ಷಣ ಪಡೆದುಕೊಳ್ಳಲು ಹೆಣಗಾಡುತ್ತಿದ್ದಾರೆ. ವೃತ್ತಿಯಾಗಿ ವಿವಿಧ ಆಯ್ಕೆಗಳನ್ನು ಅನುಸರಿಸುತ್ತಿದ್ದಾರೆ. ಮೀಸಲಾತಿಯನ್ನು ರದ್ದುಪಡಿಸಿ, ಅವರನ್ನು ಇಡಬ್ಲ್ಯೂಎಸ್ ವರ್ಗದ ಅಡಿಯಲ್ಲಿ ತಂದ ನಂತರ, ಮುಸ್ಲಿಂ ಹೆಣ್ಣು ಮಕ್ಕಳು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆಂದು ಸಾಹಿತಿ ಡಾ ಕೆ ಷರೀಫಾ ಹೇಳಿದ್ದಾರೆ.

ಅಖಿಲ ಭಾರತ ವಕೀಲರ ಸಂಘದ (AILAJ) ರಾಷ್ಟ್ರೀಯ ಅಧ್ಯಕ್ಷ ಮೈತ್ರೇಯಿ ಕೃಷ್ಣನ್ ಅವರು ಸರ್ಕಾರದ ನಿರ್ಧಾರವನ್ನು ಸಂವಿಧಾನದ ಮೇಲಿನ "ದಾಳಿ" ಎಂದು ಕರೆದರು.

ಸರ್ಕಾರದ ಈ ಕ್ರಮವು ಅಲ್ಪಸಂಖ್ಯಾತರು ಮತ್ತು ತುಳಿತಕ್ಕೊಳಗಾದವರ ಅಸಮಾನತೆ ಮತ್ತು ದುರ್ಬಲತೆಯನ್ನು ಉಲ್ಬಣಗೊಳಿಸುತ್ತದೆ, ಸರ್ಕಾರವು ಮೀಸಲಾತಿ ನೀತಿಯನ್ನು ವಿರೂಪಗೊಳಿಸಿದೆ ಎಂದು ಕಿಡಿಕಾರಿದರು.

ಹಾವನೂರು ಆಯೋಗದ ವರದಿ, ಚಿನ್ನಪ್ಪ ರೆಡ್ಡಿ ವರದಿ ಮತ್ತು ಸಾಚಾರ್ ಸಮಿತಿ ವರದಿಗಳ ಶಿಫಾರಸ್ಸುಗಳನ್ನು ಆಧರಿಸಿ ವೈಜ್ಞಾನಿಕ ಮೌಲ್ಯಮಾಪನದ ನಂತರ ಮುಸ್ಲಿಮರಿಗೆ ಮೀಸಲಾತಿ ನೀಡಲಾಗಿತ್ತು ಎಂದರು. ಅಲ್ಲದೆ, ರಾಷ್ಟ್ರೀಯ ಶಿಕ್ಷಣ ನೀತಿಯು (ಎನ್‌ಇಪಿ) ಅಲ್ಪಸಂಖ್ಯಾತರ ನಿಗ್ರಹಿಸುವ ಕ್ರಮವಾಗಿದೆ ಎಂದು ಟೀಕಿಸಿದರು.

ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ಪಿಎಚ್‌ಡಿ ವಿದ್ಯಾರ್ಥಿಗಳ ವಿದ್ಯಾರ್ಥಿವೇತನವನ್ನು ಕಡಿತಗೊಳಿಸುವುದರ ಮೂಲಕ ಮತ್ತು ಸಮಾನ ಮತ್ತು ಗುಣಮಟ್ಟದ ಶಿಕ್ಷಣ ನಿರಾಕರಿಸುವುದು, ಕೇಂದ್ರದಲ್ಲಿ ಮೌಲಾನಾ ಆಜಾದ್ ರಾಷ್ಟ್ರೀಯ ಫೆಲೋಶಿಪ್ ಅನ್ನು ರದ್ದು ಪಡಿಸುವ ಮೂಲಕ ಅಲ್ಪಸಂಖ್ಯಾತರನ್ನು ಮೂಲೆಗುಂಪು ಮಾಡಲಾಗುತ್ತಿದೆ. ಸರ್ಕಾರದ ಇತ್ತೀಚಿನ ಕ್ರಮಗಳು ಸಾಮಾಜಿಕ ನ್ಯಾಯವನ್ನು ಬುಡಮೇಲು ಮಾಡುತ್ತಿವೆ ಎಂದು ಎಐಎಸ್ಎ ಸದಸ್ಯ ಸೈಯದ್ ಜುನೈದ್ ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com