ಬೆಂಗಳೂರು: ಕನಕಪುರದ ಸಾತನೂರು ಬಳಿ ಶನಿವಾರ ನಡೆದಿದ್ದ ಜಾನುವಾರು ವ್ಯಾಪಾರಿ ಇದ್ರಿಷ್ ಪಾಷ ಹತ್ಯೆ ಪ್ರಕರಣದಲ್ಲಿ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತಿತರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು,ಅವರ ಬಂಧನಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಇದರ ಬೆನ್ನಲ್ಲೇ ಫೇಸ್ ಬುಕ್ ಲೈವ್ ನಲ್ಲಿ ಹೇಳಿಕೆ ನೀಡಿರುವ ಪುನೀತ್ ಕೆರೆಹಳ್ಳಿ, ನನ್ನ ವಿರುದ್ಧ ಎಫ್ ಐಆರ್ ದಾಖಲಾಗಿದ್ದರೆ ವಿಚಾರಣೆ ಎದುರಿಸುತ್ತೇನೆ. ಪ್ರಕರಣದ ವಿಚಾರವಾಗಿ ಕಾನೂನಾತ್ಮಕವಾಗಿ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.
ಎಲ್ಲೂ ಕಾನೂನನ್ನು ಮೀರಿಲ್ಲ, ಯಾರಿಗೂ ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ. ದುಡ್ಡು ಮಾಡಲು ಈ ಹೋರಾಟಕ್ಕೆ ಬಂದಿಲ್ಲ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಕುಮಾರಸ್ವಾಮಿ ಯಾರೇ ನನ್ನ ವಿರುದ್ಧ ನಿಂತರೂ ಹೋರಾಟ ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ.
ಮಂಡ್ಯದಿಂದ ಹಲಗೂರು, ಸಾತನೂರು ಮಾರ್ಗವಾಗಿ ನಿರಂತರವಾಗಿ ಜಾನುವಾರು ಸಾಗಣೆಯಾಗುತ್ತಿದ್ದು, ಇದಕ್ಕೆ ರಾಜಕಾರಣಿಗಳ ಕೃಪಾಕಟಾಕ್ಷವಿದೆ ಎಂದು ಪುನೀತ್ ಕೆರೆಹಳ್ಳಿ ದೂರಿದ್ದಾರೆ.
Advertisement