ಪಂಚರತ್ನ ಯೋಜನೆಗಳ ಜಾರಿಗೆ ತೆರಿಗೆಯಿಲ್ಲ, ಜನರ ಮೇಲೆ ಸಾಲದ ಹೊರೆ ಹೊರಿಸುವುದಿಲ್ಲ: ಎಚ್.ಡಿ.ಕುಮಾರಸ್ವಾಮಿ

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಪಂಚರತ್ನ ಯೋಜನೆಗಳ ಅನುಷ್ಠಾನಕ್ಕಾಗಿ ಯಾವುದೇ ಹೊಸ ತೆರಿಗೆ ಹೇರುವುದಿಲ್ಲ, ಸಾಲವನ್ನೂ ತರುವುದಿಲ್ಲ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಪಂಚರತ್ನ ಯೋಜನೆಗಳ ಅನುಷ್ಠಾನಕ್ಕಾಗಿ ಯಾವುದೇ ಹೊಸ ತೆರಿಗೆ ಹೇರುವುದಿಲ್ಲ, ಸಾಲವನ್ನೂ ತರುವುದಿಲ್ಲ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬುಧವಾರ ಪಂಚರತ್ನ ಯಾತ್ರೆಯಲ್ಲಿ ಮಾತನಾಡಿದ ಅವರು, ಜಾಗತಿಕವಾಗಿ ಹೆಸರು ಮಾಡಿರುವ ಮಹಾನಗರದಲ್ಲಿ ಬಡತನ ಇನ್ನೂ ತಾಂಡವವಾಡುತ್ತಿರುವುದು ಅತ್ಯಂತ ನೋವಿನ ಸಂಗತಿ. ಈ ಬಡತನಕ್ಕೆ ಪರಿಹಾರ ಪಂಚರತ್ನಗಳಲ್ಲಿ ಇದೆ. ಈ ಯೋಜನೆಗಳಿ ಸಂಜೀವಿನಿಯಾಗಿ ಕೆಲಸ ಮಾಡುತ್ತವೆ

ಪಂಚರತ್ನ ಯೋಜನೆಗಳು ರಾಜ್ಯದ ಜನರ ಜೀವನದಲ್ಲಿ ಮಹತ್ತರ ಬದಲಾವಣೆ ತರಲಿವೆ. ನಗರದಲ್ಲಿ ಇರುವ ಬಡತನದ ಸಮಸ್ಯೆ ಸೇರಿದಂತೆ ಅನೇಕ ಸವಾಲುಗಳನ್ನು ಎದುರಿಸಿ ಮುನ್ನಡೆಯಲು ಈ ಯೋಜನೆಗಳು ಸಹಕಾರಿಯಾಗಲಿವೆ. 25 ವರ್ಷ ಅಧಿಕಾರ ಕೊಟ್ಟರೆ ಅಮೃತ ಕಾಲ ತರುವುದಾಗಿ ಬಿಜೆಪಿಯವರು ಹೇಳುತ್ತಾರೆ. ನಾನು ಹಾಗೆ ಕೇಳುವುದಿಲ್ಲ. ಒಂದು ಬಾರಿ ನನಗೆ ಅವಕಾಶ ಕೊಡಿ, ಎಲ್ಲರ ಬದುಕು ಹಸನು ಮಾಡುವೆ’ ಎಂದರು.

ಒಂದು ಬಾರಿ ನನಗೆ ಅವಕಾಶ ಕೊಡಿ, ನಾನು ಇನ್ನೂ ಇಪ್ಪತ್ತೈದು ವರ್ಷ ಅಧಿಕಾರ ಕೊಡಿ ಎಂದು ಕೇಳುವುದಿಲ್ಲ. ಅಮೃತಕಾಲ ತರುತ್ತೇವೆ ಎಂದು ಬಿಜೆಪಿಯವರು ಹೇಳುತ್ತಾರೆ. ಅವರು ಯಾರಿಗೆ ಅಮೃತಕಾಲ ತರುತ್ತಾರೆ.? ಈವರೆಗೆ ಅಧಿಕಾರದಲ್ಲಿದ್ದ ಅಲ್ಪ ಸಮಯದಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇನೆ. ಪಂಚರತ್ನ ಯೋಜನೆಗಳ ಜಾರಿ ನನ್ನ ಜೀವಿತಾವಧಿಯ ಕನಸು. ಈ ಯೋಜನೆಗಳು ಜಾರಿಗೆ ಬಂದರೆ ಎಲ್ಲರ ಬದುಕು ಹಸನಾಗುತ್ತದೆ" ಎಂದು ಭರವಸೆ ನೀಡಿದ್ದಾರೆ.

ಕುಮಾರಸ್ವಾಮಿ ಬುಧವಾರ ಬೆಳಿಗ್ಗೆ ಮಾಗಡಿ ರಸ್ತೆ, ಓಕಳಿಪುರ, ಶ್ರೀರಾಮಪುರ ಸೇರಿದಂತೆ ಗಾಂಧಿನಗರ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಯಾತ್ರೆ ನಡೆಸಿ, ಮತ ಯಾಚಿಸಿದರು. ಸಂಜೆ ಸಿಸಿಬಿ ಕಚೇರಿ ಎದುರಿ ನಿಂದ ಯಾತ್ರೆ ಆರಂಭಿಸಿದ ಕುಮಾರಸ್ವಾಮಿ, ಚಾಮರಾಜಪೇಟೆ ವಿವಿಧ ಕ್ಷೇತ್ರದಲ್ಲಿ ಸಂಚರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com