ಬೆಂಗಳೂರು: ಆರ್‌ಸಿಬಿ ಗೆಲುವಿಗಾಗಿ ಅಭಿಮಾನಿಗಳಿಂದ ವಿಶೇಷ ಪೂಜೆ, ತಪ್ಪಿದ ದೊಡ್ಡ ದುರಂತ!

ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವು ಸಾಧಿಸಲಿ ಎಂದು ಅಭಿಮಾನಿಗಳು ಗುರುವಾರ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಕೋಲ್ಕತ್ತಾ: ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವು ಸಾಧಿಸಲಿ ಎಂದು ಅಭಿಮಾನಿಗಳು ಗುರುವಾರ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ದೊಡ್ಡ ಪ್ರಮಾಣದಲ್ಲಿ ಕರ್ಪೂರ ಹಚ್ಚಿದ್ದರಿಂದ ದೇವಾಲಯದಲ್ಲಿ ಆವರಣದಲ್ಲಿ ನಿಲ್ಲಿಸಲಾಗಿದ್ದ ಹಲವು ಬೈಕ್ ಗಳಿಗೆ ಬೆಂಕಿ ಹೊತ್ತಿಕೊಂಡಿದೆ.  ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು  ಪರಿಸ್ಥಿತಿಯನ್ನು ನಿಯಂತ್ರಿಸಿದ್ದು, ಭಾರೀ ಅನಾಹುತವೊಂದನ್ನು ತಪ್ಪಿಸಿದ್ದಾರೆ.

ಕರಗ ಉತ್ಸವದ ಸಂದರ್ಭದಲ್ಲಿ ದ್ರೌಪದಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗಿತ್ತು.  ಆರ್‌ಸಿಬಿ ಅಭಿಮಾನಿಗಳು ನೂರಾರು ಕೆಜಿ ಕರ್ಪೂರ ಹಚ್ಚಿದ್ದಾಗ ಎನ್.ಆರ್. ಜಂಕ್ಷನ್ ನಿಂದ ದೇವಾಲಯದವರೆಗೂ ಪಾರ್ಕಿಂಗ್ ಮಾಡಲಾಗಿದ್ದ ಬೈಕ್ ಗಳಿಗೆ ಬೆಂಕಿ ತಗುಲಿದೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಘಟನೆಯಲ್ಲಿ ಹಾನಿಯಾದ ವಾಹನಗಳ ವಿವರ ಇನ್ನೂ ತಿಳಿದುಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ತಿಗಳರಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ 10 ಗಂಟೆಯಿಂದ ಉತ್ಸವವೂ ಆರಂಭವಾಯಿತು. ಕರಗ ಉತ್ಸವ 11 ದಿನಗಳ ಕಾಲ ನಡೆಯಲಿದೆ. ಈ ಮಧ್ಯೆ ಇಂತಹ ಅಹಿತಕರ ಘಟನೆ ನಡೆದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com