ಏಪ್ರಿಲ್ 8ಕ್ಕೆ ಸಂಸದೀಯ ಮಂಡಳಿ ಸಭೆ: ಇಂದು ಸಂಜೆ ಸಿಎಂ ಬೊಮ್ಮಾಯಿ, ಬಿಎಸ್.ಯಡಿಯೂರಪ್ಪ ದೆಹಲಿಗೆ

2 ದಿನಗಳ ನಡೆಯುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಭಾಗವಹಿಸಲು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಅವರು, ಶುಕ್ರವಾರ ಸಂಜೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಲಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: 2 ದಿನಗಳ ನಡೆಯುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಭಾಗವಹಿಸಲು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಅವರು, ಶುಕ್ರವಾರ ಸಂಜೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಲಿದ್ದಾರೆ.

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯ ರಾಜ್ಯ ಚುನಾವಣಾ ಸಮಿತಿಯು ಪ್ರತಿ ಕ್ಷೇತ್ರಕ್ಕೆ ಮೂವರ ಹೆಸರನ್ನು ಶಾರ್ಟ್‌ಲಿಸ್ಟ್ ಮಾಡಿದ್ದು, ನಾಳೆ ನಡೆಯಲಿರುವ ಸಂಸದೀಯ ಮಂಡಳಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಸಂಸದೀಯ ಮಂಡಳಿ ಸಭೆ ನಾಳೆ ದೆಹಲಿಯಲ್ಲಿ ನಡೆಯಲಿದೆ. ಇಂದು ಸಂಜೆ ದೆಹಲಿಗೆ ತೆರಳುತ್ತಿದ್ದು, 2 ದಿನಗಳ ಕಾಲ ನಡೆಯಲಿರುವ ಸಭೆಯಲ್ಲಿ ಚರ್ಚೆ ಪಟ್ಟಿಯ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

'ರಾಜ್ಯ ಚುನಾವಣಾ ಸಮಿತಿಯು ಚರ್ಚಿಸಿ ಪ್ರತಿ ಕ್ಷೇತ್ರಕ್ಕೆ ಮೂವರ ಹೆಸರುಗಳನ್ನು (ಪ್ರತಿ ಕ್ಷೇತ್ರಕ್ಕೆ) ಶಾರ್ಟ್‌ಲಿಸ್ಟ್ ಮಾಡಿದ್ದು, ಈ ಕುರಿತು ಕ್ಷೇತ್ರ ಮತ್ತು ಜಿಲ್ಲಾ ಮಟ್ಟದಲ್ಲಿ ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದೆ. ಈ ಅಭಿಪ್ರಾಯಗಳನ್ನು ಹಿಡಿದು ದೆಹಲಿಯಲ್ಲಿರುವ ಸಂಸದೀಯ ಮಂಡಳಿಯಲ್ಲಿ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

ಮೇ 10ರಂದು ರಾಜ್ಯ ವಿಧಾನಸಬಾ ಚುನಾವಣೆ ನಡೆಯಲಿದ್ದು, ಈಗಾಗಲೇ ಕಾಂಗ್ರೆಸ್ ಒಟ್ಟು 224 ಸ್ಥಾನಗಳ ಪೈಕಿ 166 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಇನ್ನು ಜೆಡಿಎಸ್ 93 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.

ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುವ ಗುರಿ ಹೊಂದಿರುವ ರಾಜ್ಯ ಬಿಜೆಪಿಯು ಒಟ್ಟು 224 ಸ್ಥಾನಗಳ ಪೈಕಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com