ಬಾಲಿವುಡ್ ನಿರ್ಮಾಪಕ ಬೋನಿ ಕಪೂರ್ ಕುಟುಂಬಕ್ಕೆ ಸೇರಿದ 39 ಲಕ್ಷ ರೂ. ಮೌಲ್ಯದ ಬೆಳ್ಳಿ ವಶಕ್ಕೆ

ಬಾಲಿವುಡ್ ಖ್ಯಾತ ನಟಿ ದಿವಂಗತ ಶ್ರೀದೇವಿ ಪತಿ ಬೋನಿ ಕಪೂರ್ ಅವರ ಕುಟುಂಬಕ್ಕೆ ಸೇರಿದ ಬೆಳ್ಳಿ ಹಾಗೂ ಕಾರನ್ನು ಪೊಲೀಸರು ದಾವಣಗೆರೆಯಲ್ಲಿ ವಶಕ್ಕೆ ಪಡೆದಿದ್ದಾರೆ.
ಬೋನಿ ಕಪೂರ್
ಬೋನಿ ಕಪೂರ್

ದಾವಣಗೆರೆ: ಬಾಲಿವುಡ್ ಖ್ಯಾತ ನಟಿ ದಿವಂಗತ ಶ್ರೀದೇವಿ ಪತಿ ಬೋನಿ ಕಪೂರ್ ಅವರ ಕುಟುಂಬಕ್ಕೆ ಸೇರಿದ ಬೆಳ್ಳಿ ಹಾಗೂ ಕಾರನ್ನು ಪೊಲೀಸರು ದಾವಣಗೆರೆಯಲ್ಲಿ ವಶಕ್ಕೆ ಪಡೆದಿದ್ದಾರೆ.

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಹೆಬ್ಬಾಳು ಟೋಲ್ ಚೆಕ್‌ಪೋಸ್ಟ್ ಬಳಿ ಚುನಾವಣಾಧಿಕಾರಿಗಳು 66 ಕೆಜಿ ಬೆಳ್ಳಿ ಪಾತ್ರೆಗಳು ಮತ್ತು ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

ಐದು ಬಾಕ್ಸ್‌ಗಳಲ್ಲಿ ಪ್ಯಾಕ್ ಮಾಡಲಾಗಿದ್ದ ವಸ್ತುಗಳನ್ನು ಚೆನ್ನೈನಿಂದ ಮುಂಬೈಗೆ ಬಿಎಂಡಬ್ಲ್ಯು ಕಾರಿನಲ್ಲಿ ಸಾಗಿಸಲಾಗುತ್ತಿತ್ತು.

ಕಾರನ್ನು ತಪಾಸಣೆ ನಡೆಸಿದ ಅಧಿಕಾರಿಗಳ ತಂಡಕ್ಕೆ ಕಾರಿನ ಚಾಲಕ ಸುಲ್ತಾನ್ ಖಾನ್ ಮತ್ತು ಕಾರಿನಲ್ಲಿದ್ದ ಹರಿ ಸಿಂಗ್ ರಘುನಾಥ್ ದಾಖಲೆ ಹಾಗೂ ಸರಿಯಾದ ಉತ್ತರ ನೀಡಲಿಲ್ಲ. ಈ ಹಿನ್ನೆಲೆಯಲ್ಲಿ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ದಾಖಲೆಗಳ ಪ್ರಕಾರ ಕಾರು ಬೋನಿ ಕಪೂರ್ ಅವರಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ. ಆದರೆ, ಕಾರಿನಲ್ಲಿ ಬೋನಿಕಪೂರ್ ಇರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com