ಯುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಿ: ಬಿಜೆಪಿ ಹೈಕಮಾಂಡ್‌ಗೆ ತೇಜಸ್ವಿ ಸೂರ್ಯ ಮನವಿ

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಯುವಕರಿಗೆ ಆದ್ಯತೆ ನೀಡಬೇಕು ಎಂದು ಬಿಜೆಪಿ ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಲೋಕಸಭೆ ಸಂಸದ ತೇಜಸ್ವಿ ಸೂರ್ಯ ಅವರು ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.
ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ

ಕಲಬುರಗಿ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಯುವಕರಿಗೆ ಆದ್ಯತೆ ನೀಡಬೇಕು ಎಂದು ಬಿಜೆಪಿ ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಲೋಕಸಭೆ ಸಂಸದ ತೇಜಸ್ವಿ ಸೂರ್ಯ ಅವರು ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.

ಬಿಜೆಪಿಯ ಡಿಜಿಟಲ್ ಕಾರ್ಯಕರ್ತರ ಸಮಾವೇಶದಲ್ಲಿ ಶನಿವಾರ ಭಾಗವಹಿಸಲು ಆಗಮಿಸಿದ್ದ ತೇಜಸ್ವಿ ಸೂರ್ಯ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು.

ಯುವಕರಿಗೆ ನಿರ್ದಿಷ್ಟ ಸ್ಥಾನ ನೀಡುವಂತೆ ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡಿದ್ದೆ. ಮನವಿಯಂತೆ ಯುವಕರಿಗೆ ಇಂತಿಷ್ಟು ಸೀಟುಗಳನ್ನು ನೀಡಿದೆ. ಆದರೆ, ಯುವಕರಿಗೆ ಎಷ್ಟು ಸೀಟುಗಳನ್ನು ಕೇಳಿದ್ದೆ ಎಂಬುದರ ಮಾಹಿತಿಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

ಬಿಜೆಪಿ ಪ್ರಜಾಸತ್ತಾತ್ಮಕ ರೀತಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಆರಂಭಿಸಿದೆ. ವಿವಿಧ ಕ್ಷೇತ್ರಗಳಿಂದ ಅಭ್ಯರ್ಥಿಗಳಾಗಿ ಆಯ್ಕೆಯಾಗುವ ನಾಯಕರ ಕುರಿತು ಅಭಿಪ್ರಾಯ 22 ಸಾವಿರಕ್ಕೂ ಅಧಿಕ ಕಾರ್ಯಕರ್ತರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಮತ್ತು ರಾಜ್ಯ ಮಟ್ಟದ ಕೋರ್ ಕಮಿಟಿಗಳಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದೆ.

ಏಪ್ರಿಲ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com