ಮೈಸೂರು: ಬಂಡೀಪುರ ಅರಣ್ಯ ಪ್ರದೇಶದಲ್ಲಿ ಟ್ರಾಫಿಕ್ ಜಾಮ್, 6 ಕಿ.ಮೀವರೆಗೂ ಸಾಲುಗಟ್ಟಿ ನಿಂತ ವಾಹನಗಳು

ತಮಿಳುನಾಡಿಗೆ ಪ್ರವೇಶಿಸುವ ಎಲ್ಲಾ ವಾಹನಗಳನ್ನು ತಮಿಳುನಾಡು ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿ, ಹಸಿರು ತೆರಿಗೆ ಸಂಗ್ರಹಿಸುತ್ತಿರುವ ಹಿನ್ನೆಲೆಯಲ್ಲಿ ಬಂಡೀಪುರ ಅರಣ್ಯ ಪ್ರದೇಶದಲ್ಲಿ ಸಂಚಾರ ದಟ್ಟಣೆ ಎದುರಾಗಿ, ಪ್ರವಾಸಿಗರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮೈಸೂರು: ತಮಿಳುನಾಡಿಗೆ ಪ್ರವೇಶಿಸುವ ಎಲ್ಲಾ ವಾಹನಗಳನ್ನು ತಮಿಳುನಾಡು ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿ, ಹಸಿರು ತೆರಿಗೆ ಸಂಗ್ರಹಿಸುತ್ತಿರುವ ಹಿನ್ನೆಲೆಯಲ್ಲಿ ಬಂಡೀಪುರ ಅರಣ್ಯ ಪ್ರದೇಶದಲ್ಲಿ ಸಂಚಾರ ದಟ್ಟಣೆ ಎದುರಾಗಿ, ಪ್ರವಾಸಿಗರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.

ವಾಹನ ತಪಾಸಣೆ ನಡೆಸುತ್ತಿರುವ ಪರಿಣಾಮ ಬಂಡೀಪುರದಲ್ಲಿ 6 ಕಿ.ಮೀಗೂ ಹೆಚ್ಚು ದೂರ ಸಂಚಾರ ದಟ್ಟಣೆ ಎದುರಾಗಿದೆ. ಇದರಿಂದಾಗಿ ನೀಲಗಿರಿ ಬೆಟ್ಟ ಹಾಗೂ ಊಟಿಗೆ ತೆರಳುತ್ತಿದ್ದ ಪ್ರವಾಸಿಗರು ಪರದಾಡುವಂತಾಯಿತು.

ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ಮೈಸೂರು-ನಂಜನಗೂಡು ರಸ್ತೆ ಹಾಗೂ ಗುಂಡ್ಲುಪೇಟೆ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿದೆ. ಹೀಗಾಗಿ ಈ ರಸ್ತೆಯಲ್ಲಿ ತೆರಳುವ ವಾಹನಗಳು ಚಾಮರಾಜನಗರಕ್ಕೆ ತೆರಳಲು ರಿಂಗ್ ರಸ್ತೆ ಹಾಗೂ ಟಿ ನರಸೀಪುರ ರಸ್ತೆಯ ಮೂಲಕ ಸಾಗಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com